Advertisement
ನಗರದ ವಿಮಾನ ನಿಲ್ದಾಣ ದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳ ಜತೆ ಮಾತನಾಡಿ, ಸಭೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು ಎನ್ನುವುದರ ಬಗ್ಗೆ ಚರ್ಚಿಸಲಾಗುವುದು. ಆ ನಿಟ್ಟಿನಲ್ಲಿ ಅನಿರೀಕ್ಷಿತ ಬೆಳವಣಿಗೆ ದೊಡ್ಡದಾಗೇನು ನಿರೀಕ್ಷಿತ ವಿಲ್ಲ ಎಂದ ಅವರು, ಇನ್ನು ದೇಶದಲ್ಲಿ ಲೋಕಸಭಾ ಚುನಾವಣೆ ಗೆಲ್ಲಲು ಇಂಡಿಯಾ ಒಕ್ಕೂಟ ಒಂದಾಗಿ, ಒಗ್ಗಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಮತ್ತು ಅದೇ ರೀತಿ ಒಂದಾಗಿ ಕೆಲಸ ನಿರ್ವಹಿಸುತ್ತೇವೆ ಎಂದರು.
ಮೋದಿ ಅವರು ಎಲ್ಲವೂ ಪರ್ಸನಲ್ ಆಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ನೆರೆಹೊರೆಯ ರಾಷ್ಟ್ರಗಳ ಜತೆಯಲ್ಲಿ ಸಂಬಂಧ ಚೆನ್ನಾಗಿ ಇಟ್ಟುಕೊಳ್ಳಬೇಕು. ಕೆಟ್ಟ ಪರಿಸ್ಥಿತಿ ಬಂದಾಗ ನಾವು ಹೋರಾಟಕ್ಕೂ ಸಿದ್ದರಾಗಬೇಕಾಗುತ್ತದೆ. ಇಂದಿರಾಗಾಂಧಿ ಯಾವ ರೀತಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಅಂತಹ ಹೋರಾಟ ಮಾಡಬೇಕಾಗುತ್ತದೆ ಎಂದರು.
Related Articles
Advertisement
ಮೂವರು ಡಿಸಿಎಂ ವಿಚಾರ ಹೈಕಮಾಂಡ್ ಮುಂದೆ ಇಲ್ಲ:ರಾಜ್ಯದಲ್ಲಿ ಮೂರು ಡಿಸಿಎಂ ವಿಚಾರ ನಮ್ಮ ಮುಂದೆ ಬಂದಿಲ್ಲ. ಈ ವಿಚಾರ ನೀವು ಸಿದ್ರಾಮಯ್ಯ, ಡಿಕೆ ಶಿವಕುಮಾರ ಅವರಿಗೆ ಕೇಳಿ ಎಂದ ಖರ್ಗೆ, ನಮ್ಮ ಮುಂದೆ ಇಂತಹ ಪ್ರಸ್ತಾವನೆ ಇಲ್ಲ. ಇದೆಲ್ಲಾ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಬರಬಾರದು. ಸದ್ಯಕ್ಕೆ ಸರಕಾರ ನಡೆಸುವ ಕಡೆಗೆ, ಸಮಸ್ಯೆಗಳ ಕಡೆಗೆ ಗಮನ ಕೊಡಬೇಕು, ನಮ್ಮ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು ಎಂದರು.