ರಾಜಸ್ಥಾನ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸುವ ಭರದಲ್ಲಿ ರಾಹುಲ್ ಗಾಂಧಿ ಎಂದು ತಪ್ಪಾಗಿ ಹೆಸರಿಸಿ ಪೇಚಿಗೆ ಸಿಲುಕಿದ್ದಾರೆ. ಬಿಜೆಪಿ ಇದನ್ನೇ ಬಂಡವಾಳವಾಗಿ ಬಳಸಿ ಕಾಂಗ್ರೆಸ್ ನಾಯಕನ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವ್ಯಂಗ್ಯವಾಡಿದೆ.
ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ರಾಹುಲ್ ಗಾಂಧಿಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ” ಎಂದು ತಪ್ಪಿ ಹೇಳಿಕೆ ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲಿದ್ದ ನಾಯಕರೊಬ್ಬರು ಕೂಡಲೇ ಖರ್ಗೆ ಅವರ ಗಮನಕ್ಕೆ ತಂದಿದ್ದಾರೆ.
ಆ ವೇಳೆ ವೇದಿಕೆಯಲ್ಲೇ ಕ್ಷಮೆಯಾಚಿಸಿದ ಖರ್ಗೆ. ನಾನು ರಾಹುಲ್ ಗಾಂಧಿ… ರಾಜೀವ್ ಗಾಂಧಿ ಅವರು ರಾಷ್ಟ್ರದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ನೀಡಿದ್ದಾರೆ ಎಂದು ನಾನು ತಪ್ಪಾಗಿ ಹೇಳಿದ್ದೇನೆ. ಕಾಂಗ್ರೆಸ್‌ನಲ್ಲಿ ದೇಶಕ್ಕಾಗಿ ಪ್ರಾಣ ನೀಡಿದ ನಾಯಕರಿದ್ದಾರೆ ಮತ್ತು ಬಿಜೆಪಿಯಲ್ಲಿ ಜೀವ ತೆಗೆಯುವ ನಾಯಕರಿದ್ದಾರೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಆದರೆ ಖರ್ಗೆ ಅವರ ಈ ಹೇಳಿಕೆ ಬಿಜೆಪಿ ನಾಯಕರಿಗೆ ಬಂಡವಾಳವಾಗಿ ಬಳಸಿಕೊಂಡಿದ್ದಾರೆ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಣುಕನ್ನು ಶೇರ್ ಮಾಡಿದ್ದಾರೆ.
200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಕಾಂಗ್ರೆಸ್ ಬಿಜೆಪಿ ಹಗಲಿರುಳು ಪ್ರಚಾರದಲ್ಲಿ ತೊಡಗಿದೆ.
ಇದನ್ನೂ ಓದಿ: Daily Horoscope: ಸ್ವಂತ ಉದ್ಯಮದ ಅಭಿವೃದ್ಧಿಗೆ ಹೊಸ ಮಾರ್ಗ ಅನ್ವೇಷಣೆ