Advertisement

ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ

03:04 PM Apr 17, 2021 | Team Udayavani |

ಬೀದರ: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಸವಕಲ್ಯಾಣದ ಮಾಜಿ‌ ಶಾಸಕ ಮಲ್ಲಿಕಾರ್ಜುನ ಖೂಬಾ  ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಆದೇಶಿಸಿದ್ದಾರೆ.

Advertisement

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಿಂತು ನಮ್ಮ ಪಕ್ಷದ ಶಿಸ್ತನ್ನು ಉಲ್ಲಂಘಿಸಿದಿರಿ. ಪಕ್ಷ ಎಲ್ಲ ರೀತಿಯ ಕೊನೆ ಗಳಿಗೆ ಪ್ರಯತ್ನ ನಡೆಸಿದರೂ ಸಹ ಕಣದಿಂದ ಹಿಂದೆ ಸರಿಯಲಿಲ್ಲ ಎಂದು ಖೂಬಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ವಿರೋಧಿ ಚಟುವಟಿಕೆಗಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next