Advertisement

ಮೇಲ್ಮನವಿ ಸಲ್ಲಿಕೆಗೆ ಅನುಮತಿ ಕೋರಿದ ಮಲ್ಯ

12:30 AM Feb 16, 2019 | Team Udayavani |

ಲಂಡನ್‌: ಭಾರತಕ್ಕೆ ಗಡೀಪಾರು ಮಾಡುವಂತೆ ಬ್ರಿಟಿಷ್‌ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಲು ಅನುಮತಿ ಕೋರಿ ಯುನೈಟೆಡ್‌ ಕಿಂಗ್‌ಡಮ್‌ ಹೈಕೋರ್ಟ್‌ನಲ್ಲಿ ಉದ್ಯಮಿ ವಿಜಯ್‌ ಮಲ್ಯ ಅರ್ಜಿ ಸಲ್ಲಿಸಿದ್ದಾರೆ. 

Advertisement

ಹೈಕೋರ್ಟ್‌ನ ಆಡಳಿತಾತ್ಮಕ ವಿಭಾಗದಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. 10 ದಿನಗಳ ಹಿಂದಷ್ಟೇ ಗೃಹ ಕಾರ್ಯದರ್ಶಿ ಸಾಜಿದ್‌ ಜಾವಿದ್‌ ಈ ಸಂಬಂಧ ಆದೇಶ ಹೊರಡಿಸಿದ್ದರು. 14 ದಿನಗಳೊಳಗಾಗಿ ಮೇಲ್ಮನವಿ ಸಲ್ಲಿಸಲು ಮಲ್ಯಗೆ ಅವಕಾಶವನ್ನು ಒದಗಿಸಲಾಗಿತ್ತು. ಮಲ್ಯ ಅರ್ಜಿಯನ್ನು ನ್ಯಾಯಾಧೀಶರಿಗೆ ತಲುಪಿಸಲಾಗಿದ್ದು, ಮುಂದಿನ ಎರಡರಿಂದ ನಾಲ್ಕು ವಾರಗಳೊಳಗೆ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಧೀಶರು ಸಮ್ಮತಿಸಿದರೆ, ಮುಂದಿನ ಕೆಲವು ತಿಂಗಳೊಳಗೆ ವಿಚಾರಣೆ ಆರಂಭವಾಗಲಿದೆ. ಒಂದು ವೇಳೆ ಈಗಿನ ಅರ್ಜಿ ತಿರಸ್ಕರಿಸಲ್ಪಟ್ಟರೂ, ಮರಳಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ವಿಚಾರಣೆ ದಿನವನ್ನು ನಿಗದಿಪಡಿಸಲಾಗುವುದು.

Advertisement

Udayavani is now on Telegram. Click here to join our channel and stay updated with the latest news.

Next