Advertisement

“ಅಪೌಷ್ಟಿಕತೆ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವುದು ಅಗತ್ಯ’

12:29 AM Sep 16, 2019 | Sriram |

ಮಡಿಕೇರಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಟಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪೋಷಣ ಅಭಿಯಾನ ಮಾಸಾಚರಣೆ ಹಮ್ಮಿಕೊಂಡಿದ್ದು, ಈ ಯೋಜನೆಯ ಪ್ರಯೋಜನ ಅರ್ಹರಿಗೆ ತಲುಪುವಂತಾಗಬೇಕು ಎಂದು ಶಾಸಕ‌ ಕೆ.ಜಿ.ಬೋಪಯ್ಯ ಅವರು ಕರೆ ನೀಡಿದ್ದಾರೆ.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕೆಳಗಿನ ಕೊಡವ ಸಮಾಜದಲ್ಲಿ ಶುಕ್ರವಾರ ನಡೆದ ಪೋಷಣ ಅಭಿಯಾನ ಮಾಸಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಷ್ಟ್ರದಲ್ಲಿ ಪೊಲಿಯೋ ನಿರ್ಮೂಲನೆಯಾದಂತೆ ಅಪೌಷ್ಟಿಕತೆಯೂ ನಿರ್ಮೂಲನೆಯಾಗಬೇಕು. ಆ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಅಪೌಷ್ಟಿಕತೆ ನಿವಾರಣೆ ಮಾಡಲು ಕೈಜೋಡಿಸಬೇಕಿದೆ ಎಂದರು.

ಗ್ರಾಮೀಣ ಹಾಗೂ ಕುಗ್ರಾಮಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಸಂಖ್ಯೆ ತಡೆಯಲು ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಕೆ.ಬೋಪಣ್ಣ ಹೇಳಿದರು.

ಅವರು ಮಾತನಾಡಿ ಮಹಿಳೆಯರು ಮತ್ತು ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಪೌಷ್ಟಿಕ ಆಹಾರ ಸೇವಿಸಬೇಕು. ಆ ನಿಟ್ಟಿನಲ್ಲಿ ಪೋಷಣ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಜಿ.ಪಂ. ಸದಸ್ಯೆ ಅಪ್ಪಂಡೇರಂಡ ಭವ್ಯಾ ತಿಳಿಸಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಡಾ| ಆನಂದ್‌ ವಿದ್ಯಾರ್ಥಿಗಳಿಗೆ ಜಾಗೃತಿ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.

ವಿಕಲಚೇತನರ ಅಧಿಕಾರಿ ಸಂಪತ್‌ ಕುಮಾರ್‌, ವ್ಯವಸ್ಥಾಪಕರಾದ ಸವಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್‌, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಜಿಲ್ಲಾ ನಿರೂಪಣಾ ಅಧಿಕಾರಿ ಅರುಂಧತಿ ಅವರು ಸ್ವಾಗತಿಸಿದರು, ಜಯಂತಿ ನಿರೂಪಿಸಿದರು. ಸಂಗೀತ ಮತ್ತು ತಂಡದವರು ನಾಡಗೀತೆ ಹಾಡಿದರು.

ಜಾಥಾಗೆ ಚಾಲನೆ: ನಗರದ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಪೋಷಣ ಮಾಸಾಚರಣೆ ಕುರಿತ ಜಾಥಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧ ಅವರು ಚಾಲನೆ ನೀಡಿದರು.
ಸೀಮಂತ ನಡೆಯಿತು. ಹಣೆಗೆ ಅರಸಿನ, ಕುಂಕುಮ ಹಚ್ಚಿ, ಫ‌ಲ ತಾಂಬೂಲ ನೀಡಿ ಸೀಮಂತ ನೆರವೇರಿಸಲಾಯಿತು. ನಂತರ ಆರೋಗ್ಯವಂತ ಶಿಶು ಪ್ರದರ್ಶನ ನಡೆಯಿತು. ಪೌಷ್ಟಿಕ ಆಹಾರಗಳ ಪ್ರದರ್ಶನ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದಂತೆ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಆಯುಷ್ಮಾನ್‌ ಭಾರತ ಮಾಹಿತಿ ನೀಡಲಾಯಿತು.

ವಿವಿಧ ಯೋಜನೆ
ಆರು ವರ್ಷದೊಳಗಿನ ಮಕ್ಕಳಿಗೆ ಹಾಗೂ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ವಿವಿಧ ಯೋಜನೆ ಆಯೋಜಿಸಲಾಗಿದೆ ವಿಶೇಷವಾಗಿ ಪ್ರಸವ ಪೂರ್ವ ಆರೋಗ್ಯ ತಪಾಸಣೆ ಹಮ್ಮಿಕೊಳ್ಳು ವುದು. ಪ್ರಸವ ಪೂರ್ವ ಆರೋಗ್ಯ ತಪಾಸಣೆ ಒಳಗಾದವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಲಾಗುತ್ತದೆ ಎದೆಹಾಲಿನ ಮಹತ್ವದ ಬಗ್ಗೆ ತಿಳಿಸುವುದು. ತೂಕವನ್ನು ಮಾಡಿ ಅಪೌಷ್ಟಿಕ ಮಕ್ಕಳನ್ನು ಗುರುತಿಸುವುದು. ಚುಚ್ಚುಮದ್ದು ಮತ್ತು ವಿಟಮಿನ್‌ ವಿ ಎ ದಿನ ಆಚರಣೆ. ತಾಯಂದಿರ ಸಭೆ ಅನ್ನಪ್ರಾಶನ ದಿನ ಆಚರಣೆ, ಸೀಮಂತ ಗರ್ಭಿಣಿಯರ ಎಎನ್‌ಎಸ್‌ ತಪಾಸಣೆ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next