Advertisement

Malpe: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ; ನಕಲಿ ಆಧಾರ್‌ ಕಾರ್ಡ್‌ ವಶ

11:32 AM Oct 12, 2024 | Team Udayavani |

ಉಡುಪಿ: ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ಶುಕ್ರವಾರ (ಅ.11) ಬಂಧಿಸಿದ್ದಾರೆ. ಇವರು ಮಲ್ಪೆಗೆ ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದರು.

Advertisement

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್‌, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾ‌ರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next