ಮಲ್ಪೆ: ಮಲ್ಪೆ ಬಂದರಿನ ಒಂದನೇ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಮಾಜ ಸೇವಕ ಈಶ್ವರ್ ಅವರ ಸಮಯ ಪ್ರಜ್ಞೆಯಿಂದಾಗಿ ಭಾರೀ ದುರಂತ ತಪ್ಪಿರುವ ಘಟನೆ ಸೋಮವಾರ ನಡೆದಿದೆ.
Advertisement
ಯಾರೋ ದುಷ್ಕರ್ಮಿಗಳು ಬೋಟಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಇದರಿಂದಾಗಿ ಬೋಟ್‌ನ ಟೈರ್‌ಗೆ ಬೆಂಕಿ ಹತ್ತಿಕೊಂಡಿದೆ. ಸುತ್ತಮುತ್ತ ಹಲವಾರು ಬೋಟುಗಳು ನಿಲ್ಲಿಸಲಾಗಿದ್ದು, ತತ್‌ಕ್ಷಣ ಈಶ್ವರ್ ಮಲ್ಪೆ ಅವರು ಅಗಮಿಸಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಈಶ್ವರ್ ಮಲ್ಪೆ ಆಗ್ರಹಿಸಿದ್ದಾರೆ.