Advertisement

ಮಲ್ಪೆ : ಹಾವು ಕಚ್ಚಿ ವ್ಯಕ್ತಿ ಸಾವು : ಮನೆಯ ಕಪಾಟಿನ ಮೇಲಿದ್ದ ಬಟ್ಟೆ ತೆಗೆಯಲು ಹೋದಾಗ ದುರಂತ

10:52 PM Jun 14, 2022 | Team Udayavani |

ಮಲ್ಪೆ : ನಾಗರಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್‌ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಸುಧಾಕರ ಅಮೀನ್‌ (55) ಅವರಿಗೆ ಜೂ. 8ರಂದು ತಮ್ಮ ಮನೆಯ ಕೋಣೆಯಲ್ಲಿ ಕಪಾಟಿನ ಮೇಲೆ ಇಟ್ಟಿದ್ದ ಅಂಗಿಯನ್ನು ತೆಗೆಯಲು ಹೋದಾಗ ಕಪಾಟಿನ ಮೇಲೆ ಇದ್ದ ನಾಗರಹಾವು ಕಚ್ಚಿದೆ.

ಕೂಡಲೇ ಸುಧಾಕರ ಅಮೀನ್‌ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜೂ. 13ರಂದು ಮಧ್ಯಾಹ್ನದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮೃತರ ಅಕ್ಕ ವನಜ ಅಮೀನ್‌ ಅವರು ನೀಡಿದ ದೂರಿನಂತೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :  ಕಾರ್ಕಳ: ಜೀವ ಬೆದರಿಕೆ ಒಡ್ಡಿದ ಪ್ರಕರಣ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next