ಮಲ್ಪೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಮೀನುಗಾರಿಕೆ ಇಲಾಖೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ವತಿಯಿಂದ ಮಲ್ಪೆ ಮೀನುಗಾರಿಕೆ ಬಂದರಿನ ಬೇಸಿನ್ ಹಾಗೂ ನೆವಿಗೇಶನ್ ಚಾನೆಲ್ ನಿರ್ವಹಣ ಹೂಳೆತ್ತುವಿಕೆ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಮಲ್ಪೆ – ಉದ್ಯಾವರ ನದಿಯಲ್ಲಿ ನಿರ್ಮಿಸಲಾದ ಜೆಟ್ಟಿಗಳು ಹಾಗೂ ಬಂದರಿನ ಯಾಂತ್ರಿಕ ಸ್ಲಿಪ್‌ವೇ ಉದ್ಘಾಟನೆ ಜ. 25ರಂದು ಸಂಜೆ 4.30ಕ್ಕೆ ನಡೆಯಲಿದೆ.
ಮೀನುಗಾರಿಕೆ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್ ಉಪಸ್ಥಿತರಿರುವರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಬಿ.ಎಂ. ಸುಕುಮಾರ ಶೆಟ್ಟಿ, ಆಯನೂರು ಮಂಜುನಾಥ್, ಎಸ್. ಎಲ್. ಭೋಜೆಗೌಡ, ಡಾ| ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ವಿವಿಧ ನಿಗಮಗಳ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ತಿಮ್ಮಪ್ಪ ಶೆಟ್ಟಿ ಚಣಿಲ, ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಮನೋಹರ ಎಸ್. ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಪ್ರಸನ್ನ ಎಚ್., ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕಪಿಲ್ ಮೋಹನ್, ಡಾ| ಗೌರವ್ ಗುಪ್ತಾ, ಮನೋಜ್ ಜೈನ್, ಸಲ್ಮಾ ಫಾಹಿಂ, ರಾಮಾಚಾರ್ಯ, ಕ್ಯಾ| ಸಿ. ಸ್ವಾಮಿ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ಉಪಸ್ಥಿತರಿರುವರು ಎಂದು ಮೀನು ಗಾರಿಕೆ ಇಲಾಖೆಯ ಅಪರ ನಿರ್ದೇಶಕ ಗಣೇಶ್ ತಿಳಿಸಿದ್ದಾರೆ.