Advertisement

ನಾಡದೋಣಿ ಡಿಸೇಲ್ ಸಬ್ಸಿಡಿ ಪ್ರಮಾಣ ಏರಿಕೆಗೆ ಮುಖ್ಯಮಂತ್ರಿ ಒಪ್ಪಿಗೆ

09:11 AM Aug 22, 2019 | Team Udayavani |

ಬೆಂಗಳೂರು: ಮಲ್ಪೆಯ ಮೀನುಗಾರರ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಗಳ ಗೃಹ ಕಛೇರಿ ‘ಕೃಷ್ಣಾ’ದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು.

Advertisement

ಈ ಸಂದರ್ಭದಲ್ಲಿ ಮೀನುಗಾರರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಯಿತು.

ನಾಡದೋಣಿಗೆ ನೀಡಲಾಗುತ್ತಿರುವ ಡಿಸೇಲ್ ಸಬ್ಸಿಡಿ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಏರಿಸಲು ಮುಖ್ಯಮಂತ್ರಿಯವರು ಸಮ್ಮತಿಸಿದ್ದಾರೆ ಹಾಗೂ ಸುವರ್ಣ ತ್ರಿಭುಜ ದೋಣಿ ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಭೆಯ ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಬಸವರಾಜ ಪಾಟೀಲ್ ಯತ್ನಾಳ್, ಕಾಪು ಶಾಸಕ ಲಾಲಾಜಿ. ಆರ್. ಮೆಂಡನ್ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ. ಸಿ.ಕಳಸದ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next