Advertisement
ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡು ಉಸಿರಾಟಕ್ಕೆ ತೊಂದರೆಯಾಗಿತ್ತು. ತತ್‌ಕ್ಷಣ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಶೋಭಾ ಕಳೆದ 6 ತಿಂಗಳಿನಿಂದ ರಕ್ತದೊತ್ತಡ, ಮಧುಮೇಹ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್, ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್, ಬಡಾನಿಡಿಯೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ ಅವರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದ್ದಾರೆ.