Advertisement

Malpe: ಕಡೆಕಾರು ಪಡುಕರೆ; ವ್ಯಕ್ತಿ ಆತ್ಮಹ*ತ್ಯೆ

08:10 PM Nov 07, 2024 | Team Udayavani |

ಮಲ್ಪೆ: ಅನಾರೋಗ್ಯದಿಂದಾಗಿ ಖಿನ್ನತೆಗೊಳಗಾಗಿ ಕಡೆಕಾರು ಪಡುಕರೆ ನಿವಾಸಿ ಕೇಶವ (51) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು ಒಂದು ವರ್ಷದಿಂದ ಹರ್ನಿಯಾ ಮತ್ತು ಹೊಟ್ಟೆನೋವು ಕಾಯಿಲೆಯಿಂದ ಬಳಲುತ್ತಿದ್ದು, ಇದ್ದಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆ ಬಳಿಕ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು.

ಊಟ ಮಾಡಿ ಮಲಗಿದ್ದ ಕೇಶವ ಅವರು ಗುರುವಾರ ಬೆಳಗ್ಗೆ ಮನೆಯಲ್ಲಿ ಇರದಿರುವುದನ್ನು ಕಂಡು ಮನೆಯ ಬಳಿ ಹುಡುಕಿದಾಗ ಮನೆಯ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮಲ್ಪೆ: ಮಲಗಿದಲ್ಲೇ ವ್ಯಕ್ತಿ ಸಾವು
ಮಲ್ಪೆ: ತೀವ್ರ ಆಸ್ವಸ್ಥಗೊಂಡ ಮಲ್ಪೆ ಹನುಮಾನ್‌ನಗರದ ನಿವಾಸಿ ಜಯ (56) ಅವರು ಮಲಗಿದ್ದಲ್ಲೇ ಮೃತಪಟ್ಟಿರುವ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸವನ್ನು ಮಾಡುತ್ತಿದ್ದ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ನ. 6ರಂದು ಬೆಳಗ್ಗೆ 5ಕ್ಕೆ ಕೆಲಸಕ್ಕೆ ಹೋಗಿದ್ದ ಅವರು ಸಂಜೆ 5ಕ್ಕೆ ಕೆಲಸವನ್ನು ಅರ್ಧಕ್ಕೆ ಬಿಟ್ಟು ವಿಪರೀತ ಸುಸ್ತು ಎಂದು ಮನೆಗೆ ಬಂದು ಮಲಗಿದ್ದರು. ಸ್ವಲ್ಪ ಸಮಯದ ಅನಂತರ ಅವರ ಪತ್ನಿ ಎಬ್ಬಿಸಲು ಹೋದಾಗಿ ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ.

Advertisement

ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಲ್ಪೆ: ವಾಂತಿ ಬೇಧಿಯಿಂದ ವ್ಯಕ್ತಿ ಸಾವು
ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ವಾಂತಿ ಬೇದಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದ ಉ.ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಿರಣ ಕೃಷ್ಣ (37) ಅವರು ಮೃತಪಟ್ಟಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು ನ. 3ರಂದು ಮಲ್ಪೆಯ ರಾಧಾಕೃಷ್ಣ ಬೋಟಿನಲ್ಲಿ ಇತರೊಂದಿಗೆ ಆಳಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದರು. ನ. 6ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ 50 ನಾಟಿಕಲ್‌ ಮೈಲು ದೂರದಲ್ಲಿ ಮೀನುಗಾರಿಕೆಯನ್ನು ನಡೆಸುವಾಗ ವಿಪರೀತ ವಾಂತಿ ಬೇಧಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದರು. ತತ್‌ಕ್ಷಣ ಅವರನ್ನು ದಡಕ್ಕೆ ಕರದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next