Advertisement
ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಅವರು ಒಂದು ವರ್ಷದಿಂದ ಹರ್ನಿಯಾ ಮತ್ತು ಹೊಟ್ಟೆನೋವು ಕಾಯಿಲೆಯಿಂದ ಬಳಲುತ್ತಿದ್ದು, ಇದ್ದಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆ ಬಳಿಕ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದರು.
ಮಲ್ಪೆ: ತೀವ್ರ ಆಸ್ವಸ್ಥಗೊಂಡ ಮಲ್ಪೆ ಹನುಮಾನ್ನಗರದ ನಿವಾಸಿ ಜಯ (56) ಅವರು ಮಲಗಿದ್ದಲ್ಲೇ ಮೃತಪಟ್ಟಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Advertisement
ತತ್ಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಮಲ್ಪೆ: ವಾಂತಿ ಬೇಧಿಯಿಂದ ವ್ಯಕ್ತಿ ಸಾವುಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ವಾಂತಿ ಬೇದಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದ ಉ.ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಿರಣ ಕೃಷ್ಣ (37) ಅವರು ಮೃತಪಟ್ಟಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ನ. 3ರಂದು ಮಲ್ಪೆಯ ರಾಧಾಕೃಷ್ಣ ಬೋಟಿನಲ್ಲಿ ಇತರೊಂದಿಗೆ ಆಳಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದರು. ನ. 6ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ 50 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆಯನ್ನು ನಡೆಸುವಾಗ ವಿಪರೀತ ವಾಂತಿ ಬೇಧಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದರು. ತತ್ಕ್ಷಣ ಅವರನ್ನು ದಡಕ್ಕೆ ಕರದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಆದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.