Advertisement

ಮಲ್ಪೆ ಬಂದರಿಗೆ ಅಧಿಕಾರಿಗಳ ದಾಳಿ :ಮೀನು ಆಯುವ 16 ಮಂದಿ; ಅಪ್ರಾಪ್ತ ವಯಸ್ಕರು ವಶಕ್ಕೆ 

12:25 AM Nov 04, 2022 | Team Udayavani |

ಮಲ್ಪೆ: ಅಪ್ರಾಪ್ತ ವಯಸ್ಕರನ್ನು ಬಂದರಿನಲ್ಲಿ ದುಡಿಸಿಕೊಳ್ಳಲಾಗುತ್ತದೆ ಎಂಬ ದೂರಿನ ಮೇರೆಗೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್‌ ಇಲಾಖೆ, ಮಕ್ಕಳ ಸಹಾಯವಾಣಿ, ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್‌, ಮಣಿಪಾಲದ ಹೊಸಬೆಳಕು ಸಂಸ್ಥೆಯವರು ಮುಂಜಾನೆ 4.30ರ ವೇಳೆಗೆ ಕಾರ್ಯಾಚರಣೆ ನಡೆಸಿ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, ಐವರು ಬಾಲಕರು ಸೇರಿ 16 ಮಂದಿ ಮೀನು ಆಯುವ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ವಶಕ್ಕೆ ನೀಡಿದ್ದಾರೆ.

Advertisement

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್‌ ಫುಟಾರ್ಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ.

ಕಾರ್ಮಿಕ ಅಧಿಕಾರಿ ಕುಮಾರ್‌ ಈ ಸಂದರ್ಭದಲ್ಲಿ ಮಾತನಾಡಿ, ಮಕ್ಕಳ ರಕ್ಷಣ ಘಟಕದಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದ್ದು ಕಾನೂನು ಬಾಹಿರವಾಗಿ ದುಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರಗಿಸ ಲಾಗುವುದು. ಅಪ್ರಾಪ್ತ ವಯಸ್ಕ ಮಕ್ಕಳು ಯಾವುದೇ ಕೆಲಸದಲ್ಲಿ ತೊಡಗಬಾರದು; ಅವರು ಶಿಕ್ಷಣ  ಮುಂದುವರಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next