Advertisement
ಕಿರಿದಾದ ಹೆದ್ದಾರಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಂಚರಿಸುವ ವಾಹನದಿಂದಾಗಿ ಟ್ರಾಫಿಕ್ ಜಾಮ್ ಪ್ರತಿನಿತ್ಯದ ಸಮಸ್ಯೆಯಾಗಿ ಮಾರ್ಪಟ್ಟಿದೆ. ಮಲ್ಪೆಯ ಸರ್ಕಲಿನಿಂದ ಹಿಡಿದು ಕಲ್ಮಾಡಿವರೆಗೂ ಸುಮಾರು ಎರಡೂ ಕಿ.ಮೀ. ಉದ್ದಕ್ಕೆ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಅಡ್ಡಾದಿಡ್ಡಿ ವಾಹನವನ್ನು ನುಗ್ಗಿಸುವ ಚಾಲಕರಂತೂ ಸಮಸ್ಯೆಯನ್ನು ಇನ್ನಷ್ಟು ಜಟಿಲಗೊಳಿಸುತ್ತಿದ್ದಾರೆ.
ಮುಖ್ಯ ರಸ್ತೆಯ ಮೂರು ರಸ್ತೆ ಕೂಡುವಲ್ಲಿ ವಾಹನ ದಟ್ಟಣೆಯಾಗಿ ಸಂಚಾರದ ಅವ್ಯವಸ್ಥೆಯಿಂದ ಗಂಟೆಗಟ್ಟೆಲೆ ಕಾಯುವ ಸ್ಥಿತಿ ಇದೆ. ಮೀನುಗಾರಿಕಾ ಬಂದರಿನಿಂದ ಹೊರಹೋಗುವ ಮತ್ತು ಬಂದರಿನಡೆಗೆ ಬರುವ ವಾಹನಗಳು ಜತೆಗೆ ತೊಟ್ಟಂ, ಕೊಡವೂರು ಮಾರ್ಗದಿಂದ ಮಲ್ಪೆಗಾಗಿ ಮುಂದೆ ಸಾಗುವ ವಾಹನಗಳು ಇವು ಮೂರು ರಸ್ತೆ ಸೇರುವಲ್ಲಿ ಒಂದಾದಾಗ ಸಮಸ್ಯೆ ಉಂಟಾಗುತ್ತದೆ. ಸಿಟಿಬಸ್ಸುಗಳು ಪ್ರಯಾಣಿಕರನ್ನು ಈ ಮೂರು ರಸ್ತೆ ಕೂಡುವಲ್ಲಿ ನಿಲುಗಡೆಗೊಳಿಸಿ ಹತ್ತಿಸಿಕೊಳ್ಳುವುದರಿಂದಲೂ ಸಮಸ್ಯೆಯನ್ನು ಸೃಷ್ಟಿಸುತ್ತಾರೆ ಎಂದು ನಾಗರಿಕರು ಆರೋಪಿಸುತ್ತಾರೆ.
Related Articles
Advertisement
ಅದೇ ಇಕ್ಕಟ್ಟಾದ ರಸ್ತೆಮಲ್ಪೆ ಪ್ರಮುಖ ಮೀನುಗಾರಿಕಾ ಬಂದರು ಆಗಿ ಅಭಿವೃದ್ದಿಯನ್ನು ಹೊಂದುತ್ತಿದ್ದು ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಕ್ಕೆ ಪೂರಕದ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ದಿ ಅಗುತ್ತಿಲ್ಲ. 60-70 ವರ್ಷಗಳ ಹಿಂದೆ ಇದ್ದ ಇಕ್ಕಟ್ಟಾಗಿರುವ ರಸ್ತೆ ಈಗಲೂ ಅದೇ ರೀತಿ ಇದೆ. ರಸ್ತೆ ಅಗಲೀಕರಣ ಆಗುತ್ತದೆ ಎಂಬ ಮಾತು ಕಳೆದ 40 ವರ್ಷದಿಂದ ಕೇಳಿ ಬರುತ್ತಲೇ ಇದೆ. ರಾಜ್ಯ ಹೆದ್ದಾರಿ ಈಗ ರಾಷೀrÅಯ ಹೆದ್ದಾರಿಯಾಗಿ ಗುರುತಿಸಿ ಕೊಂಡಿದೆ. ಅಗಲೀಕರಣ ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ ಎನ್ನಲಾಗಿದೆ. ಏಕಮುಖ ಸಂಚಾರ
ಬಂದರಿನಿಂದ ಮೀನು ಸಾಗಾಟದ ವಾಹನಗಳನ್ನು ಕೊಳ- ಕೊರೆನೆಟ್-ಕೊಡವೂರು ಮಾರ್ಗವಾಗಿ ಹೊರಹೋಗುವ ವ್ಯವಸ್ಥೆಯನ್ನು ಮಾಡಬೇಕು. ಮುಂದೆ ಲಘ ವಾಹನಗಳು ಮೂಡುಬೆಟ್ಟು ಆದಿವುಡುಪಿ ಮಾರ್ಗವಾಗಿಯೂ, ಘನ ವಾಹನಗಳನ್ನು ಲಕೀÒ$¾ನಗರ ಸಂತೆಕಟ್ಟೆ ಮಾರ್ಗವಾಗಿ ಸಂಚರಿಸುವ ವ್ಯವಸ್ಥೆ ಮಾಡಿದರೆ ಮುಖ್ಯ ರಸ್ತೆಯಲ್ಲಿ ಸ್ವಲ್ಪ ಮಟ್ಟಿಗೆ ಟ್ರಾಫಿಕ್‌ಜಾಮ್ ಸಮಸ್ಯೆಯನ್ನು ಬಗೆಹರಿಸಬಹುದಾಗಿದೆ.
– ಶರತ್ ಕರ್ಕೇರ ಕೊಳ, ಮತೊÕéàದ್ಯಮಿ ಮಲ್ಪೆ ಹೆಚ್ಚುವರಿ ಪೊಲೀಸರು ಬೇಕು
ವಾಹನ ಸವಾರರು ಕಂಡ ಕಂಡಲ್ಲಿ ರಸ್ತೆ ಬದಿ ವಾಹನ ಪಾರ್ಕ್ ಮಾಡಿ ಸಮಸ್ಯೆ ತಂದೊಡ್ಡುತ್ತಾರೆ. ಇಲ್ಲಿ ಒಂದೆರಡು ಮಹಿಳಾ ಪೊಲೀಸರು ಇದ್ದರೂ ಅವರಿಂದ ವಾಹನ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆ ಮತ್ತು ಸಂಜೆ ಹೊತ್ತಿನಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು. ಪೊಲೀಸರು ಕೇವಲ ಹೆಲ್ಮೆಟ್ ಹಾಕದ ಬೈಕ್ ಸವಾರನನ್ನು, ದಾಖಲೆ ಸರಿಯಿಲ್ಲದ ವಾಹನಗಳನ್ನು ತಡೆದು ನಿಲ್ಲಿಸಿ ದಂಡ ವಿಧಿಸುವುದರಲ್ಲಿ ಮಾತ್ರ ಆಸಕ್ತಿ ತೋರುವುದಲ್ಲ. ಸುಗಮ ಸಂಚಾರ ವ್ಯವಸ್ಥೆಯ ಬಗ್ಗೆಯೂ ಸ್ವಲ್ಪ ಕಾಳಜಿ ವಹಿಸಬೇಕು.
– ವಿವೇಕ್ ಸುವರ್ಣ ಕೊಡವೂರು