ತೆಕ್ಕಟ್ಟೆ: ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸದಾರಾಮ ಶೆಟ್ಟಿ ಹಾಗೂ ಅವರ ಪತ್ನಿ ಸವಿತಾ ಎಸ್. ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶನಿವಾರ ಸಮ್ಮಾನಿಸಲಾಯಿತು.
ಸಮ್ಮಾನಿಸಿದ ಮಾಜಿ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಮಾತನಾಡಿ, ಸದಾರಾಮರು ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಏಳಿಗೆಗಾಗಿ ಸಮುದಾಯ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿದ್ದಾರೆ. ಅವರ ತಂದೆಯವರ ಕಾಲದಿಂದಲೂ ಇದ್ದ ಕುಟುಂಬದ ಸಂಪರ್ಕವನ್ನು ನೆನಪಿಸಿಕೊಂಡು ನಿವೃತ್ತರಿಗೆ ಶುಭ ಹಾರೈಸಿದರು.
ಸಮ್ಮಾನ ಸ್ವೀಕರಿಸಿದ ಸದಾರಾಮ ಶೆಟ್ಟಿ ಮಾತನಾಡಿ, ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರನ್ನು ನೆನಪಿಸಿಕೊಳ್ಳುವುದರ ಜತೆಗೆ ಸ್ಥಳೀಯ ವೈದ್ಯ ಕುಸುಮಾಕರ ಶೆಟ್ಟಿಯವರು ಸಂಸ್ಥೆಯ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ವೈದ್ಯಕೀಯ ಸೇವೆಯನ್ನು ಸ್ಮರಿಸಿದರು.
ತೆಕ್ಕಟ್ಟೆ ಗ್ರಾ.ಪಂ., ಶಾಲೆಯ ಅಡುಗೆ ಸಿಬಂದಿ, ಜಿಲ್ಲಾ ದೈ.ಶಿ.ಶಿಕ್ಷಕರ ಸಂಘ, ಆಪ್ತ ದೈ.ಶಿಕ್ಷಕರ ಬಳಗ ಕುಂದಾಪುರ, ಶಾಲಾಭಿವೃದ್ಧಿ ಸಮಿತಿ, ಕುಂದಾಪುರ ಮತ್ತು ಬ್ರಹ್ಮಾವರ ಪ್ರಾ| ಶಾಲಾ ಶಿಕ್ಷಕರ ಸಂಘ, ಹಳೇ ವಿದ್ಯಾರ್ಥಿ ಸಂಘದವರು ಸದಾರಾಮ ಶೆಟ್ಟಿಯವರನ್ನು ಗೌರವಿಸಿದರು.
ಗ್ರಾ.ಪಂ. ಅಧ್ಯಕ್ಷೆ ಶೋಭನಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ, ಮಂಗಳೂರು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ, ತೆಕ್ಕಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕಾರ್ಯದರ್ಶಿ ವಿಶ್ವನಾಥ ಆಚಾರ್, ನಿವೃತ್ತ ಉಪನಿರ್ದೇಶಕ ಭಾಸ್ಕರ ಶೆಟ್ಟಿ, ನಿವೃತ್ತ ಶಿಕ್ಷಣಾಧಿಕಾರಿ ಸೀತಾರಾಮ ಶೆಟ್ಟಿ, ಟೀಚರ್ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ನಿರ್ದೇಶಕರಾದ ಕಿಶನ್‌ರಾಜ್ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗ್ರಾ.ಪಂ. ಪಿಡಿಒ ಸುನಿಲ್, ಜಿಲ್ಲಾ ದೈ.ಶಿ.ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಶರತ ಕುಮಾರ್ ಶೆಟ್ಟಿ, ಕುಂದಾಪುರ ಪ್ರಾ| ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಕುಮಾರ್ ಶೆಟ್ಟಿ, ಬ್ರಹ್ಮಾವರ ವಲಯ ಅಧ್ಯಕ್ಷ ಪ್ರಶಾಂತ ಶೆಟ್ಟಿ, ಅಂಪಾರು ದಿನಕರ ಶೆಟ್ಟಿ, ದೈ.ಶಿ.ಶಿಕ್ಷಕ ವಕ್ವಾಡಿ ಬಾಲಕೃಷ್ಣ ಶೆಟ್ಟಿ, ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಆರೂರು ತಿಮ್ಮಪ್ಪ ಶೆಟ್ಟಿ, ಸಂಯೋಜಕ ರಾಘವ ಶೆಟ್ಟಿ, ನಿವೃತ್ತರ ಪುತ್ರ ನಂದೀಶ್ ರಾಮ್ ಶೆಟ್ಟಿ, ಪುತ್ರಿ ನಿರೀಕ್ಷಾ ಶೆಟ್ಟಿ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಲಲಿತಾ ಸಖಾರಾಮ ಸ್ವಾಗತಿಸಿ, ಶಿಕ್ಷಕ ಸದಾನಂದ ಶೆಟ್ಟಿ ನಿರೂಪಿಸಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂತೋಷ ಪೂಜಾರಿ ವಂದಿಸಿದರು.