ಕೋಲ್ಕತ್ತಾ : ಯಾಸ್ ಚಂಡಮಾರುತ ಧಾವಸುತ್ತಿರುವ ವಿಚಾರವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು(ಗುರುವಾರ, ಮೇ 20) ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ವಿಪತ್ತು ನಿರ್ವಹಣಾ ತಂಡ, ನಾಗರಿಕ ರಕ್ಷಣಾ ಮತ್ತು ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.
ಇದನ್ನೂ ಓದಿ : ವಿಶ್ವಪರಂಪರಾ ಪಟ್ಟಿಯ ಸಂಭವನೀಯ ಸ್ಥಳಗಳಲ್ಲಿ ಹಿರೇಬೆಣಕಲ್ ಶಿಲಾಯುಗದ ಸಮಾಧಿಗಳ ಪ್ರಸ್ತಾಪ
ಯಾಸ್ ಚಂಡಮಾರುತದ ಹಿನ್ನೆಲೆಯಲ್ಲಿ ಕಡಲ ತೀರ ವಾಸಿಗಳ ಜನರನ್ನು ಸ್ಥಳಾಂತರಿಸಲು ಸಾಧ್ಯವಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವುದರ ಬಗ್ಗೆ ಮುಖ್ಯಮಂತ್ರಿಗಳು ಸನ್ನದ್ಧತೆಯನ್ನು ಪರಿಶೀಲಿಸುವಂತೆ ಮತ್ತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೇ 19 ರಂದು, ಯಾಸ್ ಚಂಡಮಾರುತ ಮೇ 22 ರೊಳಗೆ ಬಂಗಾಳಕೊಲ್ಲಿಯಲ್ಲಿ ಸಂಭವಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ ಸೂಚನೆ ನೀಡಿತ್ತು. “ಹೊಸ ಚಂಡಮಾರುತದ ಕಡಿಮೆ ಒತ್ತಡವು ಕೊಲ್ಲಿಯಲ್ಲಿ ಪ್ರಾರಂಭವಾಗಲಿದೆ. ಮೇ 24-25ರ ವೇಳೆಗೆ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಳೆಯ ರಾಷ್ಟ್ರೀಯ ಹವಾಮಾನ ಮುನ್ಸೂಚನೆ ಕೇಂದ್ರದ ಹಿರಿಯ ವಿಜ್ಞಾನಿ ಆರ್.ಕೆ.ಜೆನಮಣಿ ಹೇಳಿದ್ದರು.
ಒಮಾನ್ ಹೆಸರಿಸಿದ ಯಾಸ್ ಚಂಡಮಾರುತವು ಮೇ 23 ರೊಳಗೆ ರೂಪುಗೊಳ್ಳುವ ನಿರೀಕ್ಷೆಯಿದೆ. ಹಾಗೂ ಮೇ 27-28ರ ವೇಳೆಗೆ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭೂಕುಸಿತವಾಗುವ ಸಂಭವವಿದೆ ಎಂದು ಕೂಡ ಇಲಾಖೆ ತಿಳಿಸಿತ್ತು.
ಈ ಹಿನ್ನೆಲೆಯಲ್ಲಿ ಸಭೆ ಕರೆದ ಮಮತಾ ಬ್ಯಾನರ್ಜಿ, ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ವರಿ ತಿಳಿಸಿದೆ.
ಇದನ್ನೂ ಓದಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ : ಬ್ಯಾಲೆನ್ಸ್ ಪರಿಶೀಲಿಸುವುದು ಹೇಗೆ..?