Advertisement

ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ,ಕೂಡಲೇ ಆಸ್ಪತ್ರೆಗೆ ದಾಖಲಿಸಿ: ಕೈಲಾಶ್

09:55 AM Dec 28, 2019 | Team Udayavani |

ಇಂದೋರ್: ಪೌರತ್ವ ತಿದ್ದುಪಡಿ  ಕಾಯ್ದೆ ಮತ್ತು ಎನ್‌ ಆರ್‌ ಸಿ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರತಿಭಟನೆ ಮುಂದುವರಿಸಲು ಸಲಹೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹರಿಹಾಯ್ದಿದ್ದಾರೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದೊಳಗೆ ಅಕ್ರಮವಾಗಿ ಒಳನುಸುಳುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ. ಹಾಗಾಗಿ ಮಮತಾ ಬ್ಯಾನರ್ಜಿ  ಅವರ ಓಟ್ ಬ್ಯಾಂಕ್ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದ್ದರಿಂದಲೇ ಅವಳು ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡು  ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದಾರೆ. ಕೂಡಲೇ ಅವರನ್ನು ವೈದ್ಯಕೀಯವಾಗಿ ಪರೀಕ್ಷೆಗೊಳಪಡಿಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ವಿಜಯವರ್ಗಿಯಾ ಸುದ್ದಿಗಾರರಿಗೆ ತಿಳಿಸಿದರು.

ಗುರುವಾರ ಕೋಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ ಆರ್‌ ಸಿ ವಿರುದ್ಧದ ಪ್ರತಿಭಟನೆಯನ್ನು ಪ್ರಜಾಪ್ರಭುತ್ವ ರೀತಿಯಲ್ಲಿ ಮುಂದುವರಿಸಲು ಎಲ್ಲ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next