Advertisement

ಸಿಎಂ ಮಮತಾ ಬ್ಯಾನರ್ಜಿ ಮನೆಯಲ್ಲಿ ಭಾರಿ ಭದ್ರತಾ ಲೋಪ ; ತನಿಖೆ

10:30 PM Jul 03, 2022 | Team Udayavani |

ಕೋಲ್ಕತಾ : ದಕ್ಷಿಣ ಕೋಲ್ಕತಾದಲ್ಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಗಡಿ ಗೋಡೆಗಳನ್ನು ಹತ್ತಿದ ಅತಿಕ್ರಮಣಕಾರನೊಬ್ಬ ಇಡೀ ರಾತ್ರಿ ಮನೆಯೊಳಗೆ ಅಡಗಿಕೊಂಡಿದ್ದ ಎಂದು ವರದಿಯಾಗಿದೆ.

Advertisement

ಶನಿವಾರ ತಡರಾತ್ರಿ ಆತ ನುಗ್ಗಿದ್ದು, ಭಾನುವಾರ ಬೆಳಗ್ಗೆ ಭದ್ರತಾ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ಕಾಳಿಘಾಟ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಯಾವ ಉದ್ದೇಶದಿಂದ ಹೈಸೆಕ್ಯುರಿಟಿ ವಲಯವನ್ನು ಪ್ರವೇಶಿಸಲು ಧೈರ್ಯಮಾಡಿದ ಮತ್ತು ಅದೂ ಗೋಡೆಗಳನ್ನು ಹತ್ತಿ ಎಂದು ಪೊಲೀಸರು ಆತನನ್ನು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮುಖ್ಯಮಂತ್ರಿ ನಿವಾಸಕ್ಕೆ ನುಗ್ಗಿ ರಾತ್ರಿಯಿಡೀ ತಲೆಮರೆಸಿಕೊಂಡಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ವ್ಯಕ್ತಿಯೊಬ್ಬ ಗೋಡೆ ಏರಿ ಮುಖ್ಯಮಂತ್ರಿಗಳ ನಿವಾಸಕ್ಕೆ ಪ್ರವೇಶಿಸಿದ್ದು, ಅಲ್ಲಿದ್ದ ಭದ್ರತಾ ಸಿಬ್ಬಂದಿ, ಅಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳಿಂದ ಹೇಗೆ ತಪ್ಪಿಸಿಕೊಂಡ ಎಂಬ ಪ್ರಶ್ನೆಗಳು ಎದ್ದಿವೆ.

ಇತ್ತೀಚೆಗಷ್ಟೇ ಅದೇ ಪ್ರದೇಶದಲ್ಲಿ ವಯೋವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿದ್ದು, ಅಲ್ಲಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಗಿತ್ತು. ಆಗ ಅಲ್ಲಿ ಅಳವಡಿಸಲಾಗಿದ್ದ ಹಲವಾರು ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸದೇ ಇರುವುದು ಬಯಲಾಗಿತ್ತು.

Advertisement

ಅಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ್ಯದ ಪ್ರಶ್ನೆಗಳನ್ನು ತಳ್ಳಿಹಾಕಲಾಗುವುದಿಲ್ಲ ಎಂದು ನಗರ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ನಿವಾಸದ ಭದ್ರತಾ ವ್ಯವಸ್ಥೆಗಳ ಉಸ್ತುವಾರಿ ವಹಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಲಾಗುವುದು ಮತ್ತು ನಿರ್ಲಕ್ಷ್ಯದ ಭಾಗದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next