Advertisement

ಹಣೆಗೆ ಗಾಯವಾಗಿ ಚಿಕಿತ್ಸೆಗೊಳಗಾಗಿದ್ದ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್

09:24 AM Mar 15, 2024 | Team Udayavani |

ಕೋಲ್ಕತ್ತಾ: ಮನೆಯಲ್ಲೇ ಬಿದ್ದು ಹಣೆ ಹಾಗೂ ಮೂಗಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ.

Advertisement

ಗುರುವಾರ ಕಾರ್ಯಕ್ರಮವೊಂದಕ್ಕೆ ತೆರಳಿ ಬಳಿಕ ಮನೆಗೆ ಬಂದ ವೇಳೆ ಅಚಾನಕ್ ಆಗಿ ಬಿದ್ದಿದ್ದರು ಈ ವೇಳೆ ಅವರ ಹಣೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿತ್ತು ಕೂಡಲೇ ಅವರನ್ನು ಸರಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಲ್ಲಿ ಪರೀಕ್ಷೆ ನಡೆಸಿದ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂದೋಪಾಧ್ಯಾಯ ಹಣೆಗೆ ಗಾಯವಾದ ನಿಟ್ಟಿನಲ್ಲಿ ಹೊಲಿಗೆ ಹಾಕಿದ್ದಾರೆ ಅಲ್ಲದೆ ಬಿದ್ದ ವೇಳೆ ಮೂಗಿಗೂ ಪೆಟ್ಟು ಬಿದ್ದುದರಿಂದ ಮೂಗಿಗೂ ಹೊಲಿಗೆ ಹಾಕಿ, ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ತಡರಾತ್ರಿ ಮನೆಗೆ ಕಳುಹಿಸಿಕೊಡಲಾಯಿತು ಎಂದು ಆಸ್ಪತ್ರೆಯ ನಿರ್ದೇಶಕ ಮಾಹಿತಿ ನೀಡಿದ್ದಾರೆ.

ಹಣೆಗೆ ಪೆಟ್ಟಾಗಿರುವ ಕಾರಣ ಅವರು ತೀವ್ರ ನಿಗಾದಲ್ಲಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಈ ವೇಳೆ ಅವರ ಜೊತೆಗೆ ಆಕೆಯ ಸೋದರಳಿಯ ಮತ್ತು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.

ಶೀಘ್ರ ಗುಣಮುಖರಾಗಲೆಂದು ಹಾರೈಸಿದ ನಾಯಕರು
ಮಮತಾ ಬ್ಯಾನರ್ಜಿ ಅವರು ಬಿದ್ದು ಪೆಟ್ಟಾಗಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದಂತೆ ಕೆಲವು ರಾಜಕೀಯ ಮುಖಂಡರು ಮಮತಾ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ, ಅದರಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದು, “ಮಮತಾ ಬ್ಯಾನರ್ಜಿ ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.”

Advertisement

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಟ್ವೀಟ್ ಮಾಡಿದ್ದೂ ಮಮತಾ ಬ್ಯಾನರ್ಜಿ ಅವರು ಗಾಯಗೊಂಡಿರುವ ಪೋಸ್ಟ್ ನೀಡಿ ಶಾಕ್” ಆಗಿರುವ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕೂಡ ಮಮತಾ ಬ್ಯಾನರ್ಜಿಯವರಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Tragedy: ಕಂದಕಕ್ಕೆ ಬಿದ್ದ ಕಾರು… ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ, ಬದುಕುಳಿದ ಮಗು

Advertisement

Udayavani is now on Telegram. Click here to join our channel and stay updated with the latest news.

Next