Advertisement

ಬಂಗಾಳಕ್ಕೆ ದೀದಿ ಅವಮಾನ

11:45 PM Feb 08, 2019 | |

ಕೋಲ್ಕತಾ/ಮಹಾರಾಜ್‌ಗಂಜ್‌: ಕೇಂದ್ರ ಸರ್ಕಾರದ ವಿರುದ್ಧ ಧರಣಿ ಕುಳಿತುಕೊಳ್ಳುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳಕ್ಕೆ ಅವಮಾನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಜಲಪಾಯ್‌ಗಾರಿಯಲ್ಲಿ ಹೈ ಕೋರ್ಟ್‌ ಕಟ್ಟಡ ಉದ್ಘಾಟಿಸಿದ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾ ಡಿದರು. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಧರಣಿ ಕುಳಿತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಿದವರು ಹಿಂಸಾತ್ಮಕ ದಾರಿಯನ್ನೇ ಹಿಡಿದಿದ್ದಾರೆ ಎಂದು ಟೀಕಿಸಿದ್ದಾರೆ. ಈ ಕಾವಲುಗಾರ ಚಿಟ್ಫ‌ಂಡ್‌ನ‌ಲ್ಲಿ ಬಡವರಿಗೆ ಮೋಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

Advertisement

ಪ್ರಧಾನಿ ಹೈಕೋರ್ಟ್‌ ಉದ್ಘಾಟಿಸಿದ್ದನ್ನು ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಎಸ್‌ಪಿ, ಬಿಎಸ್‌ಪಿಗಳಿಗೆ ಅಕ್ರಮ ವಲಸಿಗರೇ ವೋಟ್ ಬ್ಯಾಂಕ್‌ ಎಂದು ದೂರಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next