Advertisement

ಪ್ರಧಾನಿ ಹುದ್ದೆ ಮೇಲೆ ಕಣ್ಣು: ಮಮತಾ ರ‍್ಯಾಲಿ

12:55 AM Jan 07, 2019 | Team Udayavani |

ಕೋಲ್ಕತಾ:  ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ 2019ರ ಲೋಕಸಭೆ ಚುನಾವಣೆಗೂ ಮುನ್ನ ಬೃಹತ್‌ ರ‍್ಯಾಲಿಯನ್ನು ಕೋಲ್ಕತಾದಲ್ಲಿ ನಡೆಸಲು ನಿರ್ಧರಿಸಿದ್ದಾರೆ. 

Advertisement

ಇದಕ್ಕಾಗಿ ತೃತೀಯ ರಂಗ ಸ್ಥಾಪನೆಗೆ ಯತ್ನಿಸುತ್ತಿರುವ ಮುಖಂಡರನ್ನೂ ಅವರು ಆಹ್ವಾನಿಸಿದ್ದಾರೆ. ಜ. 19 ರಂದು ಕೋಲ್ಕತಾದಲ್ಲಿ ನಡೆಯಲಿರುವ ರ‍್ಯಾಲಿಗೆ ನ್ಯಾಷನಲ್‌ ಕಾನ್ಫರೆನ್ಸ್‌ ಮುಖಂಡ ಫಾರೂಕ್‌ ಅಬ್ದುಲ್ಲಾ, ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್‌, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಎನ್‌ಸಿಪಿ ಮುಖಂಡ ಶರದ್‌ ಪವಾರ್‌, ಸಮಾಜ ವಾದಿ ಪಕ್ಷದ ಮುಖ್ಯಸ್ಥ ಅಖೀಲೇಶ್‌ ಯಾದವ್‌ ಆಗಮಿಸಲಿದ್ದಾರೆ.

ಅಷ್ಟೇ ಅಲ್ಲ, ಹಿರಿಯ ವಕೀಲ ರಾಮ್‌ ಜೇಠ್ಮಲಾನಿ ಮತ್ತು ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಕೂಡ ಹಾಜರಾಗಲಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಯಾರು ಈ ಕಾರ್ಯಕ್ರ ಮದಲ್ಲಿ ಭಾಗವಹಿಸುತ್ತಾರೆ ಎಂಬುದು ಇನ್ನೂ ಖಚಿತವಾದಂತಿಲ್ಲ. ಇನ್ನೊಂದೆಡೆ ಟಿಡಿಪಿ ಹಾಗೂ ಆರ್‌ಜೆಡಿ ಕೂಡ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳ ಲಿದ್ದು, ಬಿಜೆಡಿ ಮತ್ತು ಟಿಆರೆಸ್‌ ಭಾಗವಹಿಸುವ ಸಾಧ್ಯತೆಯಿಲ್ಲ. ಜ.19 ರಂದು ಇಡೀ ನಗರವನ್ನೇ ಬಿಗಿ ಭದ್ರತೆಯಲ್ಲಿಡಲು ನಿರ್ಧರಿಸಲಾಗಿದೆ. 

5 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದ್ದು, 300 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿ ಸಲಾಗುತ್ತಿದೆ. ಅಷ್ಟೇ ಅಲ್ಲ, ಸುಮರು 10 ಲಕ್ಷ ಜನರನ್ನು ಸೇರಿಸುವ ಉದ್ದೇಶವನ್ನು ಮಮತಾ ಹೊಂದಿದ್ದಾರೆ. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿಯನ್ನು ಬಿಜೆಪಿ ಹಮ್ಮಿಕೊಳ್ಳಲು ನಿರ್ಧರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next