Advertisement

3ನೇ ಬಾರಿ ಮುಖ್ಯಮಂತ್ರಿಯಾಗಿ ದೀದಿ ಪ್ರಮಾಣ ವಚನ ಸ್ವೀಕಾರ

11:49 AM May 05, 2021 | Team Udayavani |

ಕೊಲ್ಕತ್ತಾ : ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಇಂದು  (ಬುಧವಾರ)  ಕೋಲ್ಕತ್ತಾದ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಕೋವಿಡ್ -19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಮಾವಳಿಗಳ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಪ್ರಮಾಣವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Advertisement

2021ರ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ದೀದಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ಬ್ಯಾನರ್ಜಿಗೆ ರಾಜ್ಯಪಾಲ ಜಗದೀಪ್ ಧಂಕರ್ ಅವರು ಪ್ರಮಾಣವಚನ ಭೋದಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next