Advertisement

ಪ್ರಧಾನಿ ಮೋದಿ-ಮಮತಾ ಬ್ಯಾನರ್ಜಿ ಭೇಟಿ?

10:34 PM Jul 27, 2022 | Team Udayavani |

ನವದೆಹಲಿ: ಮುಂದಿನ ತಿಂಗಳ 7ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನೀತಿ ಆಯೋಗದ ಸಮಿತಿಯ ಸಭೆ ನಡೆಯಲಿದೆ. ಅದರಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೂ ಭಾಗವಹಿಸಲಿದ್ದು ಆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಸಭೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.

Advertisement

ಮಮತಾ ಅವರು ಆ.6ರಂದು ದೆಹಲಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಕಳೆದ ವರ್ಷ ನೀತಿ ಆಯೋಗದ ಸಮಿತಿಯ ಸಭೆಯು ಆನ್‌ಲೈನ್‌ನಲ್ಲಿ ನಡೆದಿದ್ದು, ಅದರಲ್ಲಿ ಮಮತಾ ಅವರು ಭಾಗವಹಿಸಿರಲಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next