Advertisement

ಪಶ್ಚಿಮ ಬಂಗಾಳ : ನಂದಿಗ್ರಾಮ ಕ್ಷೇತ್ರದಲ್ಲಿ ಬ್ಯಾನರ್ಜಿ v/s ಸುವೇಂದು ಅಧಿಕಾರಿ..!?

01:10 PM Mar 05, 2021 | Team Udayavani |

ಕೊಲ್ಕತ್ತಾ :  ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ವರದಿಯಾಗಿದೆ.

Advertisement

ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದು, ಅವರು ಕಳೆದ ಡಿಸೆಂಬರ್ ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಓದಿ : ಹಾಸನದ ಮಗುವನ್ನು 5 ಲಕ್ಷ ರೂ. ಗೆ ಕಾರ್ಕಳದಲ್ಲಿ ಮಾರಾಟ: ಇಬ್ಬರು ಮಹಿಳೆಯರು ಸೇರಿ ಮೂವರ ಬಂಧನ

ಅರ್ಭ್ಯರ್ಥಿಗಳ ಅಂತಿಮ ಆಯ್ಕೆಯ ಸಂಬಂಧ ಪಟ್ಟಂತೆ ನಡೆಸಲಾಗಿದ್ದ ಸಭೆಯಲ್ಲಿ  ಅಸಾನ್ಸೊಲ್ ನ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಹೆಸರು ಕೇಳಿಬಂದಿದೆ ಎಂಬ ಮಾಹಿತಿಯನ್ನು ಸುದ್ದಿ ಸಂಸ್ಥೆಗಳು ತಿಳಿಸಿವೆ.

ಭವಾನಿಪುರ್ ವಿಧಾನ ಸಭಾ ಕ್ಷೇತ್ರದಲ್ಲೂ ಕೂಡ ಮಮತಾ ಬ್ಯಾನರ್ಜಿ ಕಣಕ್ಕಿಳಿಯುವ ಸಾಧ್ಯತೆ ಇರುವುದರಿಂದ ಎದುರಾಳಿಯಾಗಿ ಬಬುಲ್ ಸುಪ್ರಿಯೋ ಅವರ ಹೆಸರನ್ನು ಕೇಂದ್ರ ಸಚಿವರು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

Advertisement

ಈ ಉಭಯ ಅಭ್ಯರ್ಥಿಗಳು ಕಣಕ್ಕಿಳಿಯುವ ವಿಚಾರವು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ತೀರ್ಮಾನಕ್ಕೆ ಬಿಟ್ಟಿದ್ದು, ನಂದಿಗ್ರಾಮ, ಭವಾನಿಪುರ್ ಸೇರಿ ಪಶ್ಚಿಮ ಬಂಗಾಳದ ಪ್ರಮುಖ 13 ವಿಧಾನ ಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಮೋದಿ, ಶಾ ಹಾಗೂ ನಡ್ಡಾ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುವೇಂದು ಅಧಿಕಾರಿ ಕೂಡ ಹಾಜರಿದ್ದರು, ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯವರನ್ನು ಕನಿಷ್ಠ 50,000 ಮತಗಳಿಂದ ಸೋಲಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿಯಾಗಿದೆ.

ಓದಿ : ಬಾಂಡ್ v/s ಈಕ್ವಿಟಿ: ಮುಂಬಯಿ ಷೇರುಮಾರುಕಟ್ಟೆ ಸೆನ್ಸೆಕ್ಸ್ ಸೂಚ್ಯಂಕ 440 ಅಂಕ ಕುಸಿತ

Advertisement

Udayavani is now on Telegram. Click here to join our channel and stay updated with the latest news.

Next