Advertisement

ಗೋವಾದಲ್ಲಿ ಮಮತಾ ಬ್ಯಾನರ್ಜಿ ಚಿತ್ರಗಳಿದ್ದ ಬ್ಯಾನರ್ ಗಳ ವಿರೂಪ : ಟಿಎಂಸಿ ಕಿಡಿ

05:53 PM Oct 28, 2021 | Team Udayavani |

ಪಣಜಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಹಲವು ಫಲಕಗಳನ್ನು ಗೋವಾದಲ್ಲಿ ವಿರೂಪಗೊಳಿಸಲಾಗಿದ್ದು,ಕೃತ್ಯವನ್ನು ಖಂಡಿಸಿರುವ ಗೋವಾ ತೃಣಮೂಲ ಕಾಂಗ್ರೆಸ್ ಇದು ಬಿಜೆಪಿಯ ಅಸಹಿಷ್ಣುತೆಯನ್ನು ಬಿಂಬಿಸುತ್ತದೆ ಎಂದಿದೆ.

Advertisement

ಟಿಎಂಸಿ ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ರವರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ಮತ್ತು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರನ್ನು ತುಳಿಯಲು ಪ್ರಯತ್ನಿಸುತ್ತಿರುವ ಕಾರ್ಟೂನನ್ನು ತೃಣಮೂಲ ಕಾಂಗ್ರೆಸ್‍ನ ಗೋವಾ ಘಟಕವು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದೆ ಎಂದು ಬಿಜೆಪಿ ಭಾನುವಾರ ಆರೋಪಿಸಿತ್ತು.

ಈ ಕುರಿತ ಟ್ವೀಟ್ ನ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆಯೇ ಮಮತಾ ಬ್ಯಾನರ್ಜಿಯವರ ಚಿತ್ರಗಳಿದ್ದ ಹಲವು ಫಲಕಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಟಿಎಂಸಿ ಆರೋಪಿಸಿದೆ.

ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಪಕ್ಷದ ರಾಜ್ಯಸಭಾ ಸದಸ್ಯ ಡೇರಿಕ್ ಓಬ್ರಿಯಾನ್,”ದೇಶದಲ್ಲಿರುವ ಏಕೈಕ ಮಹಿಳಾ ಮುಖ್ಯಮಂತ್ರಿಯನ್ನು ಅವಮಾನಿಸಲಾಗಿದೆ” ಎಂದು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next