Advertisement
ತುರ್ತು ಪರಿಸ್ಥಿತಿ ಹೇರಲು ಯತ್ನ: ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಗೆ ನಿಯೋಜಿಸುವಂತೆ ಸೂಚಿಸಿದ ಕ್ರಮವನ್ನು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಆಕ್ಷೇಪಿಸಿದ್ದಾರೆ. ಗೃಹ ಕಾರ್ಯದರ್ಶಿ ಅಜಯ ಭಲ್ಲಾಗೆ ಪತ್ರ ಬರೆದು ಕಾನೂನು ಸುವ್ಯವಸ್ಥೆ ರಾಜ್ಯಗಳಿಗೆ ಸೇರಿದ್ದು. ಕೇಂದ್ರ ಬಲವಂತದ ಕ್ರಮಗಳನ್ನು ಅನುಸರಿಸುತ್ತದೆ ಎಂದು ಟೀಕಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಪರೋಕ್ಷವಾಗಿ ಪಶ್ಚಿಮ ಬಂಗಾಲದಲ್ಲಿ ತುರ್ತು ಪರಿಸ್ಥಿತಿ ಹೇರಲು ಯತ್ನಿಸುತ್ತಿ ದ್ದಾರೆ ಎಂದು ದೂರಿದ್ದಾರೆ. ಕೇಂದ್ರ ಸರಕಾರದ ಕ್ರಮ ಕೇವಲ ರಾಜಕೀಯ ಪ್ರೇರಿತ ಎಂದು ಬಣ್ಣಿಸಿರುವ ಬ್ಯಾನರ್ಜಿ, ಅಮಿತ್ ಶಾ ಸೂಚನೆ ಮೇರೆಗೆ ಈ ಪತ್ರ ಬರೆಯಲಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಡಿ.12, 13ರಂದು ಪಶ್ಚಿಮ ಬಂಗಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಈಗಾಗಲೇ ಕೋಲ್ಕತಾಕ್ಕೆ ಆಗಮಿಸಿದ್ದಾರೆ. ವೈದ್ಯಕೀಯ ವಿಜ್ಞಾನ, ಬಾಹ್ಯಾಕಾಶ, ಮೈಕ್ರೋಬಯಾಲಜಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಯುವ ಸಮುದಾಯದವರನ್ನು ಭೇಟಿಯಾಗಲಿದ್ದಾರೆ. ಜತೆಗೆ ಸರೋದ್ ವಾದಕ ಪಂ| ತೇಜೇಂದ್ರ ನಾರಾಯಣ ಮುಜುಂದಾರ್ ಅವರನ್ನು ಭೇಟಿಯಾಗಲಿದ್ದಾರೆ. ಪಶ್ಚಿಮ ಬಂಗಾಲದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ನ ಕೆಲವು ಪ್ರಮುಖ ನಾಯಕರನ್ನು ಭೇಟಿ ಯಾಗಿ ಮಾತುಕತೆ ನಡೆಸಲಿದ್ದಾರೆ. ಮುಂದಿನ ವರ್ಷದ ಎಪ್ರಿಲ್-ಮೇನಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.