Advertisement

ನನ್ನ ಹೆಸರಿನಲ್ಲಿ ಅಕ್ರಮ ಆಸ್ತಿ ನೋಂದಣಿಯಾಗಿದ್ದರೆ ನೆಲಸಮ ಮಾಡಿ: ಅಧಿಕಾರಿಗಳಿಗೆ ಮಮತಾ ಸೂಚನೆ

09:08 AM Sep 01, 2022 | Team Udayavani |

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಹೆಸರಿನಲ್ಲಿ ಅಥವಾ ಅವರ ಕುಟುಂಬದ ಸದಸ್ಯರಲ್ಲಿ ಯಾವುದೇ ಅಕ್ರಮ ಆಸ್ತಿ ನೋಂದಣಿಯಾಗಿದ್ದರೆ ತನಿಖೆ ನಡೆಸುವಂತೆ ಮತ್ತು ಯಾವುದೇ ಅಕ್ರಮಗಳು ಕಂಡುಬಂದಲ್ಲಿ ಅವುಗಳನ್ನು ನೆಲಸಮ ಮಾಡುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಅವರು ಭೂ ಮತ್ತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಕಾರ್ಯದರ್ಶಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ತಮ್ಮ ಕುಟುಂಬದ ಯಾವುದೇ ಸದಸ್ಯರಿಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ನೋಟಿಸ್ ಬಂದರೆ, “ಬಿಜೆಪಿಯ ಹಸ್ತಕ್ಷೇಪದಿಂದಾಗಿ ಇತ್ತೀಚಿನ ದಿನಗಳಲ್ಲಿ ಅದು ಕಠಿಣವಾಗಿದ್ದರೂ” ಕಾನೂನಾತ್ಮಕವಾಗಿ ಹೋರಾಡುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬುಧವಾರ ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಮತ್ತು ನನ್ನ ಕುಟುಂಬ ಸದಸ್ಯರು ಸಂಪಾದಿಸಿರುವ ಸಂಪತ್ತಿನ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳ ಕುರಿತು ಪ್ರಶ್ನಿಸಿದಾಗ ಅವರು ಈ ಹೇಳಿಕೆ ನೀಡಿದರು.

ನಾನು ಯಾವುದೇ ಆಸ್ತಿಯನ್ನು ಅತಿಕ್ರಮಣ ಮಾಡಿದ್ದೇನೆ ಅಥವಾ ಆಸ್ತಿಯನ್ನು ಅತಿಕ್ರಮಣ  ಮಾಡಲು ಯಾರಿಗಾದರೂ ಸಹಾಯ ಮಾಡಿದ್ದೇನೆ ಎಂದು ಸಾಬೀತಾದರೆ ಅದನ್ನು ನೆಲಸಮ ಮಾಡಿ, ನೀವು ಯಾರ ಅನುಮತಿಯನ್ನು ತೆಗೆದುಕೊಳ್ಳಬೇಕಾಗಿಲ್ಲ ಎಂದು ಸಿಎಂ ಮಮತಾ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಹೇಳಿದರು.

Advertisement

ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ತನ್ನ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಮಮತಾ ಬ್ಯಾನರ್ಜಿ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಹೊಸ ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next