Advertisement

Bengaluru:ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

09:41 PM Aug 03, 2024 | Team Udayavani |

ಬೆಂಗಳೂರು: ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಶನಿವಾರ( ಆಗಸ್ಟ್ 3) ಸಂಜೆ 35 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ರೈಲಿಗೆ ಸಿಲುಕಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗುರುತಿಸಲು ಮತ್ತು ಕಠಿನ ನಿರ್ಧಾರದ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ ಗ್ರೀನ್ ಲೈನ್‌ನಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಸಂಜೆ 5.45 ರ ವೇಳೆಗೆ ಆಗಮಿಸಿದ್ದು ರೈಲು ಸಮೀಪಿಸುತ್ತಿರುವ ವೇಳೆ ಮುಂದೆ ಜಿಗಿದಿದ್ದಾರೆ” ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ‘ಎಕ್ಸ್’ ಪೋಸ್ಟ್‌ನಲ್ಲಿ ತಿಳಿಸಿದೆ.

ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ಗ್ರೀನ್ ಲೈನ್‌ನಲ್ಲಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅದು ಹೇಳಿದೆ. ಉಳಿದ ವಿಭಾಗದಲ್ಲಿ ಸೇವೆಗಳು ನಡೆಯುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next