Advertisement

ಅಶ್ಲೀಲ ಫೋಟೋ ಇದೆ ಎಂದು ನೂರು ಮಹಿಳೆಯರಿಗೆ ಬ್ಲ್ಯಾಕ್ ಮೇಲ್- ಯುವಕನ ಬಂಧನ

06:48 PM Dec 30, 2020 | Team Udayavani |

ನವದೆಹಲಿ:ಅಶ್ಲೀಲ ಫೋಟೋಗಳಿವೆ ಎಂದು ಬ್ಲ್ಯಾಕ್ ಮೇಲ್ ಮಾಡಿ ದಕ್ಷಿಣ ದೆಹಲಿಯ ಮಹಿಳೆಯೊಬ್ಬರಿಂದ ಹಣ ವಸೂಲಿ ಮಾಡಲು ಯತ್ನಿಸಿದ್ದ 26 ವರ್ಷದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಈತ ಕನಿಷ್ಠ ನೂರು ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

ತನ್ನ ಬಳಿ ನಗ್ನ ಫೋಟೋಗಳಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮೊದಲು ಆರೋಪಿ ಇದೇ ರೀತಿ ಬ್ಲ್ಯಾಕ್ ಮೇಲೆ ಪ್ರಕರಣದಲ್ಲಿ ಚತ್ತೀಸ್ ಗಢದಲ್ಲಿ ಬಂಧಿಸಲ್ಪಟ್ಟಿದ್ದ ಎಂದು ಪೊಲೀಸರು ವಿವರಿಸಿದ್ದಾರೆ.

ತನ್ನ ಬಳಿ ತಮ್ಮ ಅಶ್ಲೀಲ ಫೋಟೋಗಳಿರುವುದಾಗಿ ಬೆದರಿಸಿ ಹಣ ವಸೂಲಿ ಮಾಡಲು ಸುಮಿತ್ ಜಾ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದ್ದ ಎಂದು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ. ಅಲ್ಲದೇ ಮಹಿಳೆಯರನ್ನು ಬಲೆಗೆ ಬೀಳಿಸಲು ಬಳಸುತ್ತಿದ್ದ ಮೊಬೈಲ್ ಅನ್ನು ಕೂಡಾ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಜಾ ವಿರುದ್ಧ ಸುಲಿಗೆ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಲಾಗಿದೆ. ತನ್ನ ಇನ್ಸ್ ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿ ಶೇರಿಂಗ್ ಆ್ಯಪ್ ನಲ್ಲಿದ್ದ ಫೋಟೋ ತೆಗೆದಿದ್ದ. ನಂತರ ನನ್ನ ನಗ್ನ ಚಿತ್ರಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಒಡ್ಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next