Advertisement

ಮಹಾರಾಷ್ಟ್ರ ಸಂಸದ ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

05:14 PM Apr 01, 2023 | Team Udayavani |

ಮುಂಬೈ: ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ಬಣದ ನಾಯಕ, ಸಂಸದ ಸಂಜಯ್‌ ರಾವತ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪುಣೆಯಲ್ಲಿ ಶನಿವಾರ ಪೋಲಿಸರು ಬಂಧಿಸಿದ್ದಾರೆ.

Advertisement

ಆರೋಪಿಯನ್ನು ವಿಚಾರಣೆಗೊಳಪಡಿಸಿದ ಪೋಲಿಸರು, ತನಿಖೆ ವೇಳೆ ಆತ ಲಾರೆನ್ಸ್‌ ಬಿಷ್ಣೋಯ್‌ಯ ಹೆಸರು ಹೇಳಿದ್ದು ಬಿಷ್ಣೋಯ್‌ ಗ್ಯಾಂಗ್‌ ಜೊತೆಗೆ ಆತನ ಸಂಬಂಧದ  ಬಗ್ಗೆ ತೀವ್ರ ತನಿಖೆ ನಡೆಸಲಾಗುವುದು ಎಂದು ಮುಂಬೈ ಪೋಲಿಸರು ತಿಳಿಸಿದ್ದಾರೆ.

ʻಸಂಸದ ಸಂಜಯ್‌ ರಾವತ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುವುದು. ವಿಚಾರಣೆ ವೇಳೆ ಆತ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ಯ ಹೆಸರನ್ನು ಹೇಳಿದ್ದಾನೆ. ಇತ್ತೀಚೆಗೆ ಸಲ್ಮಾನ್‌ ಖಾನ್‌ಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲೂ ಈತನಿಗೆ ನಂಟು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಿದ್ದೇವೆʼ ಎಂದು ಮುಂಬಯಿ ಪೋಲಿಸ್‌ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.

ಇದನ್ನೂ ಓದಿಮುಂಬೈ: ವಿಮಾನದಲ್ಲಿ ಮದ್ಯ ಸೇವಿಸಿ ಗಗನಸಖಿಗೆ ಕಿರುಕುಳ; ವಿದೇಶಿ ಪ್ರಜೆ ಬಂಧನ

ʼಸಂಜಯ್‌ ರಾವತ್‌ ಅವರಿಗೆ ಬಂದಿದ್ದ ಬೆದರಿಕೆ ಸಂದೇಶದಲ್ಲಿ ವ್ಯಕ್ತಿಯೊಬ್ಬ ನಿಮಗೂ ಸಿಧು ಮೂಸೆವಾಲ ಅವರ ಗತಿಯೇ ಬರಲಿದೆ. ಅವರಿಗೆ ಲಾರೆನ್ಸ್‌ ಬಿಷ್ಣೋಯ್‌ ಅವರ ಗ್ಯಾಂಗ್‌ನಿಂದ ಬೆದರಿಕೆ ಬಂದಿತ್ತು. ನೀವೂ ದೆಹಲಿಗೆ ಬಂದರೆ ನಿಮ್ಮನ್ನೂ AK 47ನಿಂದ ಕೊಲ್ಲಲಾಗುವುದು ಎಂಬ ಬೆದರಿಕೆ ಹಾಕಿದ್ದʼ ಎಂದು ಪೋಲಿಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next