Advertisement

ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ

09:23 AM Jun 27, 2022 | Team Udayavani |

ಕುಣಿಗಲ್: ದನ ಮೇಯಿಸುತ್ತಿದ್ದ ಯುವತಿಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ‌ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ.

Advertisement

ದೊಡ್ಡಕಲ್ಲಹಳ್ಳಿ ಗ್ರಾಮದ ರಾಮಕೃಷ್ಣಯ್ಯ (63 ವ) ಬಂಧಿತ ಆರೋಪಿ.

ಇದನ್ನೂ ಓದಿ:ನಗ್ನ ಜಾಲದಲ್ಲಿ ತೊಳಲಾಡುತ್ತಿರುವ ಬೀದರ್‌ನ 15 ಮಂದಿ ಪುರುಷರು!

ಸಂತ್ರಸ್ತ ಮಹಿಳೆ ಎಂದಿನಂತೆ ತನ್ನ ಗ್ರಾಮದ ಹೊರ ವಲಯದ ಬಯಲಿನಲ್ಲಿ ದನ ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ರಾಮಕೃಷ್ಣಯ್ಯ ಸಂತ್ರಸ್ತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಹೆಗಲ ಮೇಲೆ ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಅನ್ವಯ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಎರಡನೇ ಕೃತ್ಯ: ಈ ಹಿಂದೆ 2016 ರಲ್ಲಿ ಗ್ರಾಮದ ಮಹಿಳೆ ಮೇಲೆ ಅತ್ಯಾಚಾರಕ್ಕೆ  ಯತ್ನ ಸಂಬಂಧಿಸಿದಂತೆ ಹುಲಿಯೂರುದುರ್ಗ ಠಾಣೆಯಲ್ಲಿ ರಾಮಕೃಷ್ಣಯ್ಯನ ವಿರುದ್ದ ಪ್ರಕರಣ ದಾಖಲಾಗಿತ್ತು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next