Advertisement

Rajasthan: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ; ಸವಾರ ಸಜೀವ ದಹನ

10:28 AM Jun 27, 2023 | Team Udayavani |

ಜೈಪುರ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ್ ನಲ್ಲಿ ಸೋಮವಾರ (ಜೂ.26 ರಂದು) ನಡೆದಿರುವುದು ವರದಿಯಾಗಿದೆ.

Advertisement

ಗಂಗಾಪುರ ನಗರದಲ್ಲಿ ಸೋಮವಾರ ತಡರಾತ್ರಿ  ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಗಳಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಬೈಕ್‌ ಸವಾರ ಸಜೀವ ದಹನವಾಗಿದ್ದಾರೆ. ಮತ್ತೋರ್ವ ವ್ಯಕ್ತಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Chikkamagaluruಆಸ್ಪತ್ರೆ ಎದುರು ನರಳಾಡುತ್ತಿದ್ದ ತುಂಬು ಗರ್ಭಿಣಿಗೆ ಚಿಕಿತ್ಸೆ ನೀಡಿದ ವೈದ್ಯ

ಅಪಘಾತದಿಂದ ಸಜೀವ ದಹನವಾಗಿರುವ ವ್ಯಕ್ತಿಯ ಗುರುತು ಇನ್ನು ಆಗಿಲ್ಲ. ವ್ಯಕ್ತಿಯ ಗುರುತಿಗಾಗಿ ಪ್ರಯತ್ನ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next