Advertisement

UP ಅಲಿಗಢ ಮುಸ್ಲಿಂ ವಿವಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

10:11 PM Apr 16, 2023 | Team Udayavani |

ಅಲಿಗಢ (ಯುಪಿ): ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (ಎಎಂಯು) ಆವರಣದಲ್ಲಿ ಬೀದಿ ನಾಯಿಗಳ ಗುಂಪೊಂದು 65 ವರ್ಷದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿವೆ. ಎಪ್ರಿಲ್ 16ರ ಶುಕ್ರವಾರದಂದು ದಾಳಿ ನಡೆದಿದ್ದು, ಗಾಯಾಳು ತೀವ್ರ ರಕ್ತ ಸ್ರಾವವಾಗಿ ಸಾವನ್ನಪ್ಪಿದ್ದಾರೆ.

Advertisement

ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ಹಲವಾರು ನಾಯಿಗಳು ವ್ಯಕ್ತಿಯನ್ನು ಸುತ್ತುವರೆದ್ದು ಕೆಟ್ಟ ರೀತಿಯಲ್ಲಿ ದಾಳಿ ಮಾಡಿವೆ. ಮನಬಂದಂತೆ ಕಚ್ಚಿವೆ.

ದಾಳಿಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತತ್ ಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಗಾಯಾಳನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅತಿಯಾದ ರಕ್ತ ಸೋರಿಕೆಯಿಂದಾಗಿ ಮಾರ್ಗಮಧ್ಯೆ ದುರಂತವಾಗಿ ಸಾವನ್ನಪ್ಪಿದ್ದಾರೆ. ಪೊಲೀಸರು ಸಂತ್ರಸ್ತ ವ್ಯಕ್ತಿಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next