Advertisement

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

01:34 AM May 19, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ನೆಲ್ಯಾಡಿ ಗ್ರಾಮದ ತೋಟಮನೆ ನಿವಾಸಿ ಧನಂಜಯ ಗೌಡ (43) ಅವರು ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಿಸಲ್ಪಟ್ಟವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

Advertisement

ಕಳೆದ ಮೇ 11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಅವರ ತೋಟಕ್ಕೆ ಕೃಷಿ ಕೆಲಸಕ್ಕೆಂದು ಹೋದವರು, ತೆಂಗಿನ ಮರವನ್ನೇರಿದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಸುಧಾರಣೆ ಕಾಣಿಸದೇ ಇದ್ದಾಗ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟರು ಎಂದು ತಿಳಿದು ಬಂದಿದೆ.

ಮೃತರ ಪತ್ನಿ ಚಿತ್ರಕಲಾ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next