ಕಡಬ: ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಎಡಮಂಗಲದ ದೊಳ್ತಿಲದಲ್ಲಿ ಶುಕ್ರವಾರ ನಡೆದಿದೆ.
ದೊಳ್ತಿಲದ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ (25 ವ) ನೀರುಪಾಲಾದ ಯುವಕ.
ಹಲವು ಯುವಕರು ಗುರುವಾರ ರಾತ್ರಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋಗಿದ್ದರು. ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು, ಬೆಳ್ಳಾರೆ ಪೋಲೀಸರು ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದಾರೆ. ಇಂದು ಬೆಳಿಗ್ಗೆ ಯುವಕ ನಾಪತ್ತೆಯಾದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮೃತದೇಹ ಪತ್ತೆಯಾಗಿದೆ.
ಕಡಬ ತಹಶೀಲ್ದಾರರು, ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.