ವಿಜಯಪುರ: ತಾಯಿ ಮೃತಪಟ್ಟಿದ್ದಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವರಹಿಪ್ಪರಗಿ ತಾಲೂಕಿನಲ್ಲಿ ವರದಿಯಾಗಿದೆ.
ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದ ಪರಶುರಾಮ ಮಲ್ಲಪ್ಪ ನಾಯ್ಕೋಡಿ (25) ಆತ್ಮಹತ್ಯೆಗೆ ಶರಣಾದ ಯುವಕ.
ದೇವರಹಿಪ್ಪರಗಿ ಪಟ್ಟಣದಲ್ಲಿ ವಾಸವಿದ್ದ ಪರಶುರಾಮ ಕಳೆದ ಒಂದು ವರ್ಷದ ಹಿಂದೆ ತಾಯಿ ಮೃತಪಟ್ಟ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಇಂದು ಇಂಗಳಗಿ ಗ್ರಾಮದ ಸೋದರ ಮಾವನ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:ಕೌನ್ ಬನೇಗ ಕರೋಡ್ ಪತಿಯಲ್ಲಿ 25 ಲಕ್ಷ ರೂ. ಗೆದ್ದಿದ್ದಿರಿ ಎಂದು ಯುವತಿಗೆ ವಂಚನೆ
ಕಳೆದ ಕೆಲ ದಿನಗಳಿಂದ ಸೋದರ ಮಾವನ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಪರಶುರಾಮ, ತಾಯಿ ಮೃತಪಟ್ಟ ವಿಷಯದಿಂದ ಖಿನ್ನತೆ ಅನುಭವಿಸುತ್ತಿದ್ದ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ದೇವರಹಿಪ್ಪರಗಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.