Advertisement

Udupi; ಬಟ್ಟೆ ಒಗೆಯುವ ಸ್ಥಳದಲ್ಲಿ ನೇಣಿಗೆ ಶರಣು

03:22 PM Sep 08, 2023 | Team Udayavani |

ಉಡುಪಿ: ಮುಂಬೈಯಿಂದ ಬಂದ ವ್ಯಕ್ತಿಯೊಬ್ಬರು ರಾತ್ರಿ ಹೊತ್ತಿನಲ್ಲಿ ಮನೆಯ ಹೊರಗಡೆ ಇರುವ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಾಗಿಲು ಪೆರಂಪಳ್ಳಿಯ ಕಕ್ಕುಂಜೆ ದೇವಿನಗರದ ಮನೆಯೊಂದರಲ್ಲಿ ನಡೆದಿದೆ.

Advertisement

ಮೃತರನ್ನು 51 ವರ್ಷದ ಸುಕೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಮುಂಬೈಯಲ್ಲಿ ಹೋಟೆಲೊಂದರಲ್ಲಿ ಕೆಲಸಕ್ಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಣಿಪಾಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next