Advertisement

ತೆಕ್ಕಟ್ಟೆ ಮಹಾಲಿಂಗೇಶ್ವರ ದೇಗುಲದ ಒಳಗೆ ನೇಣು ಬಿಗಿದು ಯುವಕ ಆತ್ಮಹತ್ಯೆ!

08:36 AM Mar 07, 2021 | Team Udayavani |

ತೆಕ್ಕಟ್ಟೆ: ಇಲ್ಲಿನ ಮಹಾಲಿಂಗೇಶ್ವರ ದೇವಾಸ್ಥಾನದ ಒಳಗೆ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಆತ್ನಹತ್ಯೆಗೆ ಶರಣಾದ ಯುವಕನನ್ನು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35 ವ) ಎಂದು ಗುರುತಿಸಲಾಗಿದೆ. ಈತ ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದರು.

ಇದನ್ನೂ ಓದಿ:5 ಕೋ. ರೂ.ಡೀಲ್‌ ಯಾವಾಗ ನಡೆಯಿತು: ಕುಮಾರಸ್ವಾಮಿಗೆ ದಿನೇಶ್‌ ಕಲ್ಲಹಳ್ಳಿ ಪ್ರಶ್ನೆ

ಚಂದ್ರ ಪೂಜಾರಿ ಅವರು ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿದ್ದರು. ಪ್ರತಿ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದ ಈತ ಇಲ್ಲಿನ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದರು.

Advertisement

ಬಾವಿ ಹಗ್ಗ ಬಳಸಿ ಆತ್ಮಹತ್ಯೆ: ಚಂದ್ರ ಪೂಜಾರಿ ಇತ್ತೀಚಿನ ದಿನಗಳಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ. ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಚಂದ್ರ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಇಂದು ಬೆಳಗ್ಗೆ ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ: ಶಿರ್ಲಾಲು ಕುಕ್ಕುಜೆಬೈಲು: ಮೋರಿ ಕುಸಿತ ; ವಾಹನ ಸವಾರರಿಗೆ ಸಂಕಷ್ಟ

ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next