Advertisement

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

08:05 PM May 16, 2024 | Team Udayavani |

ಪುತ್ತೂರು: ಇಚ್ಲಂಪಾಡಿ ಗ್ರಾಮದ ಬೀಡುಬೈಲು ನಿವಾಸಿ, ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಚೆಂಡೆವಾದಕ ನಾಗರಾಜ ಆರಿಗ (78) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 14ರಂದು ರಾತ್ರಿ ಸಂಭವಿಸಿದೆ.

Advertisement

ನಾಗರಾಜ ಆರಿಗ ಅವರು ಬೀಡುಬೈಲು ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸವಾಗಿದ್ದರು. ಮನೆ ಕೆಲಸದವರಾದ ಸುಧಾಕರ ಅವರು ಮೇ 14ರಂದು ರಾತ್ರಿ ಮಲಗಲೆಂದು ಬಂದಾಗ ಮನೆಯಲ್ಲಿ ವಿದ್ಯುತ್‌ ದೀಪ ಉರಿಯುತ್ತಿರಲಿಲ್ಲ. ನಾಗರಾಜ ಆರಿಗ ಅವರನ್ನು ಕರೆದಾಗಲೂ ಪ್ರತಿಕ್ರಿಯೆ ಬಂದಿರಲಿಲ್ಲ. ಸ್ಥಳೀಯ ಪರಿಸರದಲ್ಲಿ ಹುಡುಕಾಟ ನಡೆಸಿದಾಗ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಮಾಹಿತಿ ಪಡೆದ ಪುತ್ರಿ ಮೇ 15ರಂದು ಬೆಳಗ್ಗೆ ಬಂದ ಬಳಿಕ ಮೃತದೇಹವನ್ನು ತೆಗೆಯಲಾಯಿತು. ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಮೇಳದಲ್ಲಿ ಕಾರ್ಯನಿರ್ವಹಿಸಿದ್ದರು:

ನಾಗರಾಜ ಆರಿಗ ಅವರು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾ ಪೋಷಿತ ಯಕ್ಷಗಾನ ಮಂಡಳಿಯಲ್ಲಿ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ ಮೇಳದಲ್ಲಿ ಹಲವು ವರ್ಷಗಳ ಕಾಲ ಚೆಂಡೆವಾದಕರಾಗಿ ಕೆಲಸ ಮಾಡಿದ್ದು, ಚೆಂಡೆ ನಾಗರಾಜ ಎಂದೇ ಗುರುತಿಸಿಕೊಂಡಿದ್ದರು. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶ ಸಮಿತಿಯಲ್ಲೂ ಸಕ್ರಿಯವಾಗಿ ಕೆಲಸ ಮಾಡಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next