Advertisement

ಮಂಗಳೂರಿನ ಕೊರೊನಾ ಶಂಕಿತ ವ್ಯಕ್ತಿ ವೆನ್ಲ್ಯಾಕ್ ಆಸ್ಪತ್ರೆಯಿಂದ ಎಸ್ಕೇಪ್

09:51 AM Mar 10, 2020 | keerthan |

ಮಂಗಳೂರು: ಕೊರೊನಾ ಶಂಕೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದುಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.

Advertisement

ದುಬೈನಿಂದ ಬಂದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ರವಿವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವಿಶೇಷ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಸದ್ಯ ಆತ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಈತ ಉಲ್ಲಾಳದ ವ್ಯಕ್ತಿಯೆಂದು ವರದಿಯಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಈ ಹಿಂದೆ ಇಸ್ರೇಲ್ ನಿಂದ ಆಗಮಿಸಿದ್ದ ಕಾರ್ಕಳ ಮೂಲದ ವ್ಯಕ್ತಿಯಲ್ಲೂ ಕೊರೊನಾ ಶಂಕೆ ವ್ಯಕ್ತವಾಗಿತ್ತು. ಅವರನ್ನು ಉಡುಪಿ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್ ಗೆ ದಾಖಲಿಸಲಾಗಿತ್ತು. ಸದ್ಯ ಅವರು ಚೇತರಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next