Advertisement
ಮಂಗಳವಾರ 12 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಕೊರೊನಾ ಸೋಂಕಿತರ ಸಂಪರ್ಕದಲ್ಲಿರುವವರ ಒಟ್ಟು 156 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 168 ವರದಿ ಬಾಕಿ ಇವೆ. ಒಟ್ಟು 1,485 ಮಂದಿ ಗೃಹ ನಿಗಾದಲ್ಲಿದ್ದು, 24 ಮಂದಿ ಇಎಸ್‌ಐ ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ. ಫಿವರ್ ಕ್ಲಿನಿಕ್‌ನಲ್ಲಿ ಒಟ್ಟು 201 ಮಂದಿಯ ತಪಾಸಣೆ ನಡೆಸಲಾಗಿದೆ. ಲಾಕ್‌ಡೌನ್ ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 54 ವಾಹನಗಳನ್ನು ವಶಪಡಿಸಿಕೊಳ್ಳಳಾಗಿದೆ.
ದ.ಕ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟು ಚಿಕಿತ್ಸೆಗೆ ದಾಖಲಾಗಿದ್ದ ಒಟ್ಟು 12 ಮಂದಿ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಜಾರಿಗೆ ತಂದ ಕಟ್ಟುನಿಟ್ಟಿನ ಕ್ರಮದಿಂದಾಗಿ ಹತ್ತು ದಿನಗಳಿಂದ ಯಾವುದೇ ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣ ದಾಖಲಾಗಲಿಲ್ಲ. 12 ಮಂದಿಯ ಪೈಕಿ ಮೂವರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತ ಹಾಗೂ ಸಂಘಟನೆಗಳು ಊಟದ ವ್ಯವಸ್ಥೆ ಮಾಡಿದ್ದು, ಮಂಗಳವಾರ ಹಂಪನಕಟ್ಟೆ ಬಸ್ ನಿಲ್ದಾಣ ಬಳಿ ದಾನಿಗಳು ತಂದ ಊಟ ಪಡೆಯಲು ಧಾವಿಸುತ್ತಿರುವ ಕಾರ್ಮಿಕರು.