ಮಂಗಳೂರು: ಇಲ್ಲಿನ ತೊಕ್ಕೊಟ್ಟು ಬಳಿ ಎಟಿಎಂ ಯಂತ್ರವನ್ನು ಒಡೆಯಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Advertisement
ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಬಾಚನಳ್ಳಿ ನಿವಾಸಿ ಬೀರಪ್ಪ ಎಂದು ಗುರುತಿಸಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಬೆಳಗಿನ ಜಾವ 2 ಗಂಟೆಗೆ ಕಳ್ಳತನ ಯತ್ನ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಆರೋಪಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬ್ಯಾಂಕ್ ಕಣ್ಗಾವಲು ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.