Advertisement

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ವಿಡಿಯೋ; ಯುವಕನ ಬಂಧನ

06:39 PM Oct 06, 2018 | Sharanya Alva |

ಚೆನ್ನೈ: ಕೇರಳದಲ್ಲಿರುವ ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಶಬರಿಮಲೆ ಸ್ವಾಮಿ ಅಯ್ಯಪ್ಪನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಿಡಿಯೋವನ್ನು ಹರಿಬಿಟ್ಟ 21 ವರ್ಷದ ಯುವಕನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

Advertisement

ತಮಿಳುನಾಡಿನ ತಿರುನಿನ್ರಾವೂರ್ ನಿವಾಸಿ ಸೆಲ್ವನ್ (21) ಎಂಬ ಯುವಕ ಸ್ವಾಮಿ ಅಯ್ಯಪ್ಪನನ್ನು ಕೆಟ್ಟದಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಬಿಟ್ಟಿದ್ದ. ಅಯ್ಯಪ್ಪ ಸ್ವಾಮಿ ಜೊತೆ ಋತುಮತಿಯಾದ ಹೆಣ್ಣಿನ ಚಿತ್ರದ ವಿಡಿಯೋವನ್ನು ಹಾಕಿರುವುದು ಹಿಂದೂ ಮಕ್ಕಳ್ ಕಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

ಅಲ್ಲದೇ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವ್ಯಕ್ತಿಯನ್ನು ಕೂಡಲೇ ಬಂಧಿಸುವಂತೆ ದೂರನ್ನು ದಾಖಲಿಸಿತ್ತು. ಸೈಬರ್ ಕ್ರೈಮ್ ಪೊಲೀಸರು ಸೆಲ್ವನ್ ಎಂಬ ಯುವಕನನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರಿಂದಾಗಿ 10ರಿಂದ 50 ವರ್ಷದವರೆಗಿನ ಮಹಿಳೆಯರು ಶಬರಿಮಲೆ ದೇವಸ್ಥಾನ ಪ್ರವೇಶಿಸಬಾರದು ಎಂಬ 800 ವರ್ಷಗಳ ನಿರ್ಬಂಧಕ್ಕೆ ತೆರೆ ಬಿದ್ದಂತಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next