Advertisement

Kerala ;ನಾಗಾಲ್ಯಾಂಡ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

04:49 PM Aug 21, 2023 | Team Udayavani |

ತಿರುವನಂತಪುರಂ: ನಾಗಾಲ್ಯಾಂಡ್ ಮೂಲದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಕೇರಳ ಪೊಲೀಸರು ಸೋಮವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

Advertisement

ತಿರುವನಂತಪುರಂ ನಿವಾಸಿ ಅನೀಶ್ ಎಂಬಾತನನ್ನು ಇಲ್ಲಿನ ತುಂಬೆ ಬಳಿ ಮಹಿಳೆಗೆ ಕಿರುಕುಳ ನೀಡಲು ಯತ್ನಿಸಿ ಗಾಯಗೊಳಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಮಹಿಳೆ ಹೋಟೆಲ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬೈಕ್‌ನಲ್ಲಿ ಬಂದ ಅನೀಶ್ ಆಕೆಗೆ ಕಿರುಕುಳ ನೀಡಲು ಯತ್ನಿಸಿ ನೆಲಕ್ಕೆ ತಳ್ಳಿ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ನಮಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ನಾವು ಸ್ಥಳಕ್ಕೆ ತಲುಪಿದೆವು. ಬಿದ್ದ ರಭಸಕ್ಕೆ ಆಕೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ನೀಡಿದ ಗುರುತಿನ ಆಧಾರದ ಮೇಲೆ ಆರೋಪಿಯನ್ನು ಒಂದು ಗಂಟೆಯೊಳಗೆ ಬಂಧಿಸಲಾಯಿತು ಮತ್ತು ಸಂತ್ರಸ್ತೆಗೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next