Advertisement

Vijayapura: ಚಲಿಸುತ್ತಿದ್ದ ರೈಲಿನಡಿ ಬಿದ್ದು ಯುವಕ ಆತ್ಮಹತ್ಯೆ

06:11 PM Mar 22, 2024 | keerthan |

ವಿಜಯಪುರ: ಚಲಿಸುತ್ತಿದ್ದ ರೈಲಿನಡಿ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಇಬ್ರಾಹಿಂಪುರ ರೈಲ್ವೇ ನಿಲ್ದಾಣ ಪರಿಸರದಲ್ಲಿ ಜರುಗಿದೆ.

Advertisement

ವಿಜಯಪುರ ನಗರದ ಇಬ್ರಾಹಿಂಪುರ ನಿಲ್ದಾಣ ಮಾರ್ಗವಾಗಿ ರೈಲು ಚಲಿಸುವಾಗ ಯುವಕ ಹಳಿಗೆ ಬಿದ್ದಿದ್ದು, ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ವಿಜಯಪುರ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ರೈಲ್ವೇ ಹಳಿಯಲ್ಲಿ ತುಂಡು ತುಂಡಾಗಿ ಬಿದ್ದಿದ್ದ ಮೃತನ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಸಂಗ್ರಹಿಸಿದ್ದಾರೆ. ಸಂಗ್ರಹಿಸಿರುವ ಮೃತ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಕ್ಕಿಯಾದ ಕಾರಣದಿಂದ ದೇಹ ಛಿದ್ರವಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಹೆಸರು ವಿಳಾಸ ಪತ್ತೆಯಾಗಿಲ್ಲ. ಪೊಲೀಸರು ಯಾರೆಂದು ಪತ್ತೆಗೆ ಮುಂದಾಗಿದ್ದಾರೆ. ವಿಜಯಪುರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next