Advertisement

JNU ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿ ಅಸಭ್ಯ ವರ್ತನೆ: ಕೇಸು ದಾಖಲು

01:09 AM Mar 10, 2024 | Team Udayavani |

ಹೊಸದಿಲ್ಲಿ: ಪ್ರತಿಷ್ಠಿತ ಜವಾಹರ್‌ಲಾಲ್‌ ನೆಹರೂ ವಿ.ವಿ. ಆವರಣದಲ್ಲಿ ಕಳೆದ ಗುರುವಾರ ಅನಾಮಿಕ ವ್ಯಕ್ತಿ ವಿದ್ಯಾರ್ಥಿನಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ವಿವಿ ಆಡಳಿತ ಮಂಡಳಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಪತ್ತೆಗಾಗಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ದಿಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಿವಿ ಆವರಣದಲ್ಲಿ ಈ ರೀತಿಯ ಕೃತ್ಯ ನಡೆದಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ವಿವಿ ಆಡಳಿತ ಮಂಡಳಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next