Advertisement

‘ಮ್ಯಾನ್‌ ಆಫ್ ದಿ ಮ್ಯಾಚ್‌’ ಹಾಡಿಗೆ ವಾಸುಕಿ ಮಸ್ತ್ ಸ್ಟೆಪ್ಸ್‌ !

08:47 AM Aug 04, 2021 | Team Udayavani |

ಬೆಂಗಳೂರು: ಇತ್ತೀಚೆಗಷ್ಟೇ “ಮ್ಯಾನ್‌ ಆಫ್ ದಿ ಮ್ಯಾಚ್‌’ ಚಿತ್ರಕ್ಕೆ ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಬಂಡವಾಳ ಹೂಡುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಇದೀಗ ಚಿತ್ರತಂಡದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಹಾಡೊಂದರಲ್ಲಿ ಗಾಯಕ ಕಂ ಸಂಗೀತ ನಿರ್ದೇಶಕ, ಮಾಜಿ ಬಿಗ್‌ಬಾಸ್‌ ಕನ್ನಡ ಸೀಸನ್‌-7ರ ಸ್ಪರ್ಧಿ ವಾಸುಕಿ ವೈಭವ್‌ ಒಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Advertisement

ಹೌದು, “ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‌ ಅವರು ನಿರ್ದೇಶನ ಮಾಡುತ್ತಿರುವ ಮೂರನೇ ಸಿನಿಮಾ “ಮ್ಯಾನ್‌ ಆಫ್ ದಿ ಮ್ಯಾಚ್‌’ ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದೀಗ ವಾಸುಕಿ ವೈಭವ್‌ ತಾವೇ ಸಂಯೋಜಿಸಿರುವ ಒಂದು ಹಾಡಿನಲ್ಲಿ ಬಿಂದಾಸ್‌ ಆಗಿ ಸ್ಟೆಪ್ಸ್‌ ಕೂಡ ಹಾಕಿದ್ದಾರೆ.

ನಿರ್ದೇಶಕ ಯೋಗರಾಜ್‌ ಭಟ್‌ ಮತ್ತು ಸತ್ಯಪ್ರಕಾಶ್‌ ಜಂಟಿಯಾಗಿ ರಚಿಸಿರುವ ಈ ಹಾಡಿಗೆ ಸ್ವತಃ ನಿರ್ದೇಶಕ ಡಿ. ಸತ್ಯಪ್ರಕಾಶ್‌ ಕೊರಿಯೋಗ್ರಫಿ ಮಾಡಿದ್ದಾರೆ. ಇನ್ನು ಪುನೀತ್‌ ರಾಜಕುಮಾರ್‌ ಒಡೆತನದ “ಪಿಆರ್‌ಕೆ ಪ್ರೊಡಕ್ಷನ್ಸ್‌’ ಮತ್ತು “ಸತ್ಯ ಮಯೂರ ಪಿಕ್ಚರ್’ ಜೊತೆಗೂಡಿ ನಿರ್ಮಿಸುತ್ತಿರುವ “ಮ್ಯಾನ್‌ ಆಫ್ ದಿ ಮ್ಯಾಚ್‌’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದಲ್ಲಿ ನಟರಾಜ್‌, ಧರ್ಮಣ್ಣ ಕಡೂರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಹುತೇಕ ಹೊಸಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next