Advertisement
ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ಆರೋಪಿ 32 ವರ್ಷ ವಯಸ್ಸಿನ ಯುವಕ ಹುಬ್ಬಳ್ಳಿ ನಗರ ಸಮೀಪದ ಕಿರೇಸೂರಿನಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಹಿಳೆಯ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
Related Articles
ಬಿಡುವಿನ ವೇಳೆಯಲ್ಲಿ ಮದ್ಯದ ಅಮಲಿನಲ್ಲಿ ಪ್ರಯಾಣಿಸುತ್ತಿದ್ದ ಕಾಯ್ದಿರಿಸದ ಪ್ರಯಾಣಿಕ ಬಸ್‌ನಿಂದ ಹೊರಬರುವ ಬದಲು ಸೀಟ್ ನಂಬರ್ 3 ರಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿದೆ.
Advertisement
ವಿರಾಮದ ಬಳಿಕ ಬಸ್ ಹತ್ತಿದ ಅದೇ ಸೀಟಿನಲ್ಲಿ ಪ್ರಯಾಣಿಸಬೇಕಾಗಿದ್ದ ಮಹಿಳೆ ನೋಡಿದ್ದಾರೆ. ಆ ಬಳಿಕ ಚಾಲಕ, ಕಂಡಕ್ಟರ್ ಮತ್ತು ಇತರ ಪ್ರಯಾಣಿಕರು ಆತನನ್ನು ಬಸ್‌ನಿಂದ ಇಳಿಸಿ ಹೋಟೆಲ್ ಬಳಿ ಬಿಟ್ಟರು.
ಸೀಟನ್ನು ಡ್ರೈವರ್ ಮತ್ತು ಕಂಡಕ್ಟರ್ ನೀರಿನಿಂದ ತೊಳೆದು ಬಟ್ಟೆಯಿಂದ ಒರೆಸಿದರು ಬಳಿಕ ಮಹಿಳೆಗೆ ಬೇರೆ ಸೀಟಿನಲ್ಲಿ ಪ್ರಯಾಣಿಸಲು ವಿನಂತಿಸಲಾಯಿತು.
ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಆರೋಪ ಸರಿಯಲ್ಲ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಘಟನೆಯ ನಂತರ ಬಸ್ ಸಿಬಂದಿ ಮಹಿಳಾ ಪ್ರಯಾಣಿಕರಿಗೆ ಭದ್ರತೆ ಮತ್ತು ಸುರಕ್ಷತೆಯ ಭರವಸೆ ನೀಡಿದರು ಮತ್ತು ಸಹಾಯ ಮಾಡಿದರು ಎಂದು ಮೂಲಗಳು ತಿಳಿಸಿವೆ. ಘಟನೆಯ ನಂತರ ಮಹಿಳಾ ಪ್ರಯಾಣಿಕರು ಆಘಾತಕ್ಕೊಳಗಾಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆರೋಪಿಯು ಸಹ ಪ್ರಯಾಣಿಕರು ಹಾಗೂ ಬಸ್ಸಿನ ಸಿಬಂದಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದ. ಆದರೆ, ಸಂತ್ರಸ್ತ ಮಹಿಳೆ ಈ ಬಗ್ಗೆ ಪೊಲೀಸ್ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹಿಳೆ ದೂರು ನೀಡಲು ಸಿದ್ಧರಿಲ್ಲದ ಕಾರಣ ಪ್ರಯಾಣ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ವಿಜಯಪುರದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿದ್ದರು ಎಂದು ಮೂಲಗಳು ವಿವರಿಸಿವೆ.
ಮಹಿಳಾ ಪ್ರಯಾಣಿಕರಿಗೆ ಸಂದೇಶ ನೀಡಲು ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.