ಛತ್ತೀಸ್‌ಗಢ: ಏಕಾಏಕಿ ಹೃದಯಾಘಾತ ಸಂಭವಿಸಿ ಮೃತಪಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ. ಸಂಭ್ರಮ, ಸಂತಸದಲ್ಲಿರುವಾಗಲೇ ಇಂಥ ಸಾವುಗಳು ಸಂಭವಿಸುತ್ತಿದೆ. ಇದೀಗ ಹೃದಯಾಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರಗಢದಲ್ಲಿ ಈ ಘಟನೆ ನಡೆದಿದ್ದು ಮದುವೆಯ ವೇದಿಕೆಯಲ್ಲಿ ಸಂಭ್ರಮದಿಂದ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು. ಅವರು ಇತ್ತೀಚೆಗೆ ತಮ್ಮ ಸಂಬಂಧಿಕರೊಬ್ಬರ ಮದುವೆಗೆ ಹೋಗಿದ್ದು, ಅಲ್ಲಿ ತನ್ನ ಆತ್ಮೀಯರೊಂದಿಗೆ ಮದುವೆ ವೇದಿಕೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಬಹಳ ಸಂತಸದಿಂದ ಭಿನ್ನ – ವಿಭಿನ್ನವಾಗಿ ಹಾಡಿಗೆ ಹೆಜ್ಜೆ ಹಾಕಿದ ಅವರು ಸುಸ್ತಾಗಿ ವೇದಿಕೆಯಲ್ಲೇ ಕೂತಿದ್ದಾರೆ. ಇದಾದ ಕೆಲವೇ ಸೆಕೆಂಡ್ ಗಳಲ್ಲಿ ಕೂತಲೇ ಕುಸಿದು ಬಿದ್ದಿದ್ದಾರೆ.
ಕುಸಿದ ದಿಲೀಪ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
Related Articles